ಕಾಂಗ್ರೆಸ್ ಪಕ್ಷಕ್ಕೆ ಬಂಜಾರ್ ಸಮಾಜದ ಗೋರ್ ಸೇನೆಯ ಬೆಂಬಲ

ವಿಜಯ ಸಂಘರ್ಷ 
ಭದ್ರಾವತಿ: ಬಂಜಾರ ಸಮಾಜದ ಹಿತರಕ್ಷಣೆಯ ಉದ್ದೇಶದಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸುವುದಾಗಿ ತಾಲೂಕು ಗೋರ್ ಸೇನೆ ಹಾಗೂ ತಾಲೂಕು ಯುವಕರ ಸಂಘದ ಯುವ ಮುಖಂಡ ಕಲ್ಪನಹಳ್ಳಿ ಪ್ರವೀಣ್ ನಾಯಕ್ ತಿಳಿಸಿದರು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಅವರು ತಿಳಿಸಿದರು.ಬಂಜಾರ ಸಮಾಜ ರಾಜಕೀಯ ಸ್ಥಾನಮಾನ ದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಮ್ಮ ರಕ್ಷಣೆಗಾಗಿ ಕಾಂಗ್ರೆಸ್ ನಮ್ಮ ಆದ್ಯತೆ ಎಂದರು.

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ನವರು ಜಾತ್ಯಾತೀತ ನಾಯಕರಾಗಿದ್ದರು. ಅವರು ಎಲ್ಲಾ ಜಾತಿ, ಧರ್ಮದ ಪರವಾಗಿ ಶ್ರಮಿಸಿದ್ದರು. ಈ ಹಿನ್ನಲೆಯಲ್ಲಿ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಬೆಂಬಲಿಸಲಾಗುತ್ತಿದೆ. ಅಲ್ಲದೆ ಕ್ಷೇತ್ರದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರು ಸಮಾಜದ ಪರವಾಗಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಬೆಂಬಲಿಸಲಾಗುತ್ತಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು