ವಿಜಯ ಸಂಘರ್ಷ
ಭದ್ರಾವತಿ: ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ಕೆಂಚಮ್ಮನ ಹಳ್ಳಿ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿರುವುದ ರಿಂದ ಅರಣ್ಯ ಇಲಾಖೆ ಕ್ರಮಕ್ಕೆ ಮುಂದಾಗಬೇಕೆಂದು ಸಾಮಾಜಿಕ ಹೋರಾಟಗಾರ ಶಿವಕುಮಾರ್ ಒತ್ತಾಯಿಸಿದ್ದಾರೆ.
ಸೋಮವಾರ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸುತ್ತ ಮುತ್ತಲ ಗ್ರಾಮಗಳಲ್ಲಿ ರೈತರ ಹೊಲ. ಗದ್ದೆಗಳಿಗೆ ನುಗ್ಗಿ ಬೆಳೆಗಳನ್ನು ಹಾಳು ಮಾಡುವುದು, ಮನೆಗಳಿಗೆ ನುಗ್ಗಿ ಆಹಾರ ಪಧಾರ್ಥಗಳನ್ನು ತಿನ್ನುತ್ತಿರು ವುದು ಮತ್ತು ವಯೋವೃದ್ಧರು ಹಾಗೂ ಪುಟ್ಟ ಮಕ್ಕಳ ಮೇಲೆ ಧಾಳಿ ಮಾಡಿ ಗಾಯ ಗೊಳಿಸುವುದು, ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದ್ವಿ-ಚಕ್ರ ವಾಹನದಲ್ಲಿ ಓಡಾಡುವ ಪ್ರಯಾಣಿಕರ ಮೇಲೆ ಎರಗಿ ಗಾಯ
ಗೊಳಿಸುವ ಕೃತ್ಯಗಳು ನಡೆಯುತ್ತಿವೆ.
ಈ ಹಿನ್ನಲೆಯಲ್ಲಿ ಮಂಗಗಳನ್ನು ಹಿಡಿದು ಬೇರಡೆಗೆ ಸ್ಥಳಾಂತರಿಸುವಂತೆ ಸಂಬಂಧ ಪಟ್ಟ ಇಲಾಖೆ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.
Tags:
ಭದ್ರಾವತಿ ಮಂಗಗಳ ಉಪಟಳ