ವಿಜಯ ಸಂಘರ್ಷ
ಭದ್ರಾವತಿ: ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್
ವಿವಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ
ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ರಾಜ್ಯಪಾಲರು ಫೆ:5ರಂದು ಡಾ.ಶರತ್ ಅವರನ್ನು ಪೂರ್ಣಾವಧಿ ಕುಲಪತಿಯಾಗಿ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದರು.
ಪ್ರೊ.ಶರತ್ ಅನಂತಮೂರ್ತಿ ಅವರು ಜ್ಞಾನಪೀಠ ಪುರಸ್ಕೃತ ಡಾ.ಯು ಆರ್ ಅನಂತಮೂರ್ತಿ ಅವರ ಪುತ್ರರಾಗಿದ್ದಾರೆ.
ಇವರು ಅಮೆರಿಕಾದ ಪ್ರತಿಷ್ಠಿತ ಅಯೋವಾ ಸ್ಟೇಟ್ ವಿಶ್ವವಿದ್ಯಾಲಯದಿಂದ ಪಿಹೆಚ್.ಡಿ. ಪದವಿ ಪಡೆದಿದ್ದಾರೆ. ಪ್ರೊ. ಶರತ್ ಬೆಂಗಳೂರು ವಿವಿಯಲ್ಲಿ 2017ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
Tags:
ಕುವೆಂಪು ವಿವಿ ನೂತನ ಕುಲಪತಿ