ರಾಜ್ಯ ಸರಕಾರ 5 ಗ್ಯಾರಂಟಿ ಯೋಜನೆಗಳನ್ನು ಮತದಾರರಿಗೆ ತಿಳಿಸಿ

ವಿಜಯ ಸಂಘರ್ಷ 

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಲೋಕಸಭಾ ಚುನಾವಣಾ ಸಭೆ ಆಯೋಜಿಸಲಾಗಿತ್ತು. 

ಜಿಲ್ಲಾಧ್ಯಕ್ಷ ಸಾಹೇಬಗೌಡ ಬಿರಾದಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪ್ರಸ್ತುತ ನಡೆಯಲಿರುವ ಲೋಕಸಭಾ ಚುನಾವಣೆ ಯಲ್ಲಿ ಜಿಲ್ಲೆಯ ಎಲ್ಲ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿ ಗಳು ರಾಜ್ಯ ಸರಕಾರ ಅನುಷ್ಠಾನ ಗೊಳಿಸಿರುವ 5 ಗ್ಯಾರಂಟಿ ಯೋಜನೆ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯಗಳನ್ನು ಜಾರಿಗೆ ತರುವ ಬಗ್ಗೆ ಗ್ರಾಮೀಣ ಪ್ರದೇಶದ ಎಲ್ಲ ಮಹಿಳೆಯರಿಗೆ, ಯುವಕರಲ್ಲಿ, ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕಿದೆ.

ಕೇಂದ್ರ ಬಿಜೆಪಿ ಸರಕಾರದ ವೈಪಲ್ಯಗಳನ್ನು ಮನವರಿಕೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ಎಚ್.ಆರ್. ರಾಜು ಆಲಗೂರ ರವರ ಗೆಲುವಿಗೆ ಹಿಂದುಳಿದ ವರ್ಗಗಳ ವತಿಯಿಂದ ಶ್ರಮಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಉಪ್ಪಾರ, ಸತೀಶ ಅಡವಿ, ಕಾರ್ಯದರ್ಶಿ ಶ್ರೀಶೈಲ ವಾಲಿಕಾರ, ಜಿಲ್ಲಾ ಸಮಿತಿ ಉಪಾಧ್ಯಕ್ಷ ಅಶೋಕ ಜೈನಾಪೂರ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ವಾಲಿಕಾರ, ಭೀಮರಾಯ ಸೀತಿಮನಿ, ಶಾಂತಪ್ಪ ಹೊಸಮನಿ, ಬೀರಪ್ಪ ಜುಮನಾಳ, ನಿಂಗಪ್ಪ ರೆಬಿನಾಳ, ಸುರೇಶ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು