ನೀರಿನ ಬಕೆಟ್ ಗೆ ಬಿದ್ದು ಮಗು ಮೃತ್ಯು

ವಿಜಯ ಸಂಘರ್ಷ 
ಸಾಗರ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಸಾಗರದಲ್ಲಿ ಭಾನುವಾರ ಸಂಜೆ ನಡೆದಿದೆ.

ಇಲ್ಲಿನ ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬವರ ಪುತ್ರಿ ಆನಂ ಫಾತಿಮಾ ಮೃತ ಮಗು ಎಂದು ತಿಳಿದು ಬಂದಿದೆ. ಸಂಜೆ ಮಗು ಮನೆಯಲ್ಲಿನ ಶೌಚಾಲಯ ದಲ್ಲಿದ್ದ ನೀರು ತುಂಬಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು