ವಿಜಯ ಸಂಘರ್ಷ
ಭದ್ರಾವತಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಚುನಾವಣೆಗೆ ನೇಮಕಗೊಂಡ ಪಿ.ಆರ್.ಓ, ಎ.ಪಿ.ಆರ್.ಓ ಸೇರಿದಂತೆ ಒಟ್ಟು 800 ಸಿಬ್ಬಂದಿಗಳಿಗೆ ಚುನಾವಣೆ ನಡೆಸುವ ಬಗ್ಗೆ ಹಾಗೂ ಇವಿಎಂ ಕುರಿತು ಪ್ರಾತ್ಯಕ್ಷಿಕೆ ತರಬೇತಿ ನೀಡಲಾಯಿತು.
ಮಂಗಳವಾರ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು 112-ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿ ಜಿ.ಹೆಚ್. ಸತ್ಯನಾರಾಯಣ ನೆರವೇರಿಸಿದರು.
ತಹಶೀಲ್ದಾರ್ ಕೆ.ಆರ್.ನಾಗರಾಜು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚೆನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಸೇರಿದಂತೆ ಹಲವರು ಹಾಜರಿದ್ದರು.