ವಿಜಯ ಸಂಘರ್ಷ
ಭದ್ರಾವತಿ: ನಗರದ ಸಾಮಾಜಿಕ ಹೋರಾಟಗಾರ ಜೆಡಿಯು ರಾಜ್ಯ ಮಾಜಿ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ 4ನೇ ಬಾರಿಗೆ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹಲವಾರು ಸಾಮಾಜಿಕ ಹೋರಾಟ ನಡೆಸಿಕೊಂಡು ಬರುವ ಜೊತೆಗೆ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದೇನೆ.
ಈಗಾಗಲೇ 3 ಬಾರಿ ವಿಧಾನಸಭಾ, ಲೋಕಸಭಾ ಮತ್ತು 1 ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಏ.16ರಂದು ನಾಮಪತ್ರ ಸಲ್ಲಿಸಲಾಗುವುದು ಎಂದರು.