ನಗರದ ವಿವಿಧೆಡೆ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್‌ ಜನ್ಮದಿನ ಆಚರಣೆ

ವಿಜಯ ಸಂಘರ್ಷ 
ಭದ್ರಾವತಿ: ನಗರದ ವಿವಿಧೆಡೆ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್‌ ಜನ್ಮದಿನ ಆಚರಿಸಲಾಯಿತು.
ಲೋಕಸಭೆ ನೀತಿ ಸಂಹಿತೆ ಹಿನ್ನಲೆಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಹಸೀಲ್ದಾರ್ ಕೆ.ಆರ್.ನಾಗರಾಜು ನೇತೃತ್ವದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಡಾ.ಬಿ.ಆರ್.ಅಂಬೇಡ್ಕ‌ರ್ ಜನ್ಮದಿನ ಆಚರಿಸಲಾಯಿತು.
ಸರ್ಕಾರಿ ನೌಕರರ ಸಂಘದ ಅಶ್ರಿತ ವಿಶ್ವೇಶ್ವರಯ್ಯ ವಿದ್ಯಾಸಂಸ್ಥೆಯಲ್ಲಿ ಸಂಘದ ಅಧ್ಯಕ್ಷ ಸಿದ್ದಬಸಪ್ಪ ನೇತೃತ್ವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ದಸಂಸ (ಭೀಮವಾದ)ವತಿಯಿಂದ:
ಸಮಿತಿಯ ಪ್ರಧಾನ ಸಂಚಾಲಕ ಪುಟ್ಟರಾಜು ನೇತೃತ್ವದಲ್ಲಿ ನಗರದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಮಾಲಾರ್ಪಣೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮ ನೆರವೇರಿಸಿದರು.

ನಗರದ ಛಲವಾದಿ ಸಮಾಜದ ವತಿಯಿಂದ ನ್ಯೂಟೌನ್ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಇಂದು ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಗೌರವಿಸಲಾಯಿತು.ಇದೆ ಸಂದರ್ಭ ದಲ್ಲಿ ಈಚೆಗೆ ಕುವೆಂಪು ವಿವಿಯಲ್ಲಿ ಗೌರವ ಪಿಎಚ್ ಡಿ ಗೆ ಭಾಜನರಾದ ತಿಪ್ಪೇಸ್ವಾಮಿ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಜನ್ನಾಪುರ ಎನ್ ಟಿಬಿ ನಗರಸಭೆ ಕಚೇರಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ ಸಮುದಾಯ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ಜನ್ಮದಿನ ವಿಶೇಷವಾಗಿ ಆಚರಿಸ ಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆ ಕಾರ್ಯಕ್ರಮ ವಿಶೇಷವಾಗಿ ವಿಶ್ವಜ್ಞಾನಿ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು