ವಿಜಯ ಸಂಘರ್ಷ
ಭದ್ರಾವತಿ: ಕಾಂಗ್ರೆಸ್ ಸರ್ಕಾರ ಸಾಲಮಾಡಿ ಜನರನ್ನು ಜವಾಬ್ದಾರಿ ಯಾಗಿಸಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ನಗರದ ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಂಪರ್ಕಸಭೆ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಲೋಕಸಭೆ ಚುನಾವಣೆಯಲ್ಲಿ ಮತಪಡೆಯಲು ಮಾಡಿರುವ ತಂತ್ರ ಎಂದು ದೂರಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕಿ ಶಾರದಾ ಪೂರ್ಯಾನಾಯ್ಕ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ, ಮಾಜಿ ಶಾಸಕ ರಘುಪತಿ ಭಟ್ ಮುಖಂಡರಾದ ಧರ್ಮಪ್ರಸಾದ್,
ಆರ್.ಕರುಣಾಮೂರ್ತಿ ಮತ್ತಿತರರಿದ್ದರು.