ವಿಜಯ ಸಂಘರ್ಷ
ತೀರ್ಥಹಳ್ಳಿ: ಶ್ವಾಸಕೋಶ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಪಿ.ಮಂಜುನಾಥ್ ಇಂದು ಸಂಜೆ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯ ದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ರಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಂಜುನಾಥ್ ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.