ನೇಹಾ ಕೊಲೆ ಪ್ರಕರಣ ಸಿಒಡಿಗೆ-ಸ್ಪೆಷಲ್​ ಕೋರ್ಟ್​ ಮೂಲಕ ತ್ವರಿತ ವಿಚಾರಣೆ : ಸಿಎಂ ಸಿದ್ದರಾಮಯ್ಯ

ವಿಜಯ ಸಂಘರ್ಷ 
ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣವನ್ನು ಸಿಒಡಿಗೆ ವಹಿಸಲಾಗುತ್ತಿದೆ. ಇತರೆ ಕಾರಣದಿಂದ ನಾನು ನೇಹಾ ಮನೆಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಆದ್ರೆ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹೋಗಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗೆ ತ್ವರಿತವಾಗಿ ಶಿಕ್ಷೆ ಆಗಬೇಕೆಂದು ವಿಶೇಷ ಕೋರ್ಟ್​​ ಗೆ ವಹಿಸಿದ್ದೇವೆ. ಆದಷ್ಟು ಬೇಗ ಪ್ರಕರಣವನ್ನು ಇತ್ಯರ್ಥ ಪಡಿಸುತ್ತೇವೆ. ನಮ್ಮ ಕಾಲದಲ್ಲಿ ಕ್ರೈಮ್ ಕಡಿಮೆ ಆಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಅವಧಿಯಲ್ಲಿ 1390 ಪ್ರಕರಣಗಳು ನಡೆದಿವೆ. ನಾವು ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕಾಂಗ್ರೆಸ್ ತನ್ನ ಶಕ್ತಿಯನ್ನು ನಂಬಿದೆ: 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಯಡಿಯೂರಪ್ಪ ನವರ ಹೇಳಿರುವ ಬಗ್ಗೆ ಉತ್ತರಿಸಿ, ಕಳೆದ ವಿಧಾನಸಭೆ ಚುನಾವಣೆ ಯಲ್ಲಿಯೂ ಯಡಿಯೂರಪ್ಪ ನವರು ಈ ರೀತಿ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ವನ್ನೂ ಸೇರಿದಂತೆ 20 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿ ಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.

ಈಶ್ವರಪ್ಪ ಸ್ಪರ್ಧೆಯಿಂದ ನಮಗೆ ಸಮಸ್ಯೆ ಆಗಲ್ಲ: 
ರಾಜ್ಯದಲ್ಲಿ ನಾವು 20 ಸೀಟು ಗೆಲ್ಲುತ್ತೇವೆ. ನಮ್ಮ ಶಕ್ತಿ ಮೇಲೆ ಶಿವಮೊಗ್ಗ ಕ್ಷೇತ್ರವನ್ನು ಸಹ ಗೆಲ್ಲುತ್ತೇವೆ. ಈಶ್ವರಪ್ಪ ಸ್ಪರ್ಧೆಯಿಂದ ನಮಗೆ ಏನೂ ಸಮಸ್ಯೆ ಆಗಲ್ಲ ಎಂದು ಸಿಎಂ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು