ವಿಜಯ ಸಂಘರ್ಷ
ವಿಜಯಪುರ: ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ರವರು ಶುಕ್ರವಾರ ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು.
ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಗಿ ಇಡೀ ಜಿಲ್ಲೆ ಪರಿಚಿತ ನಿದ್ದೇನೆ. ಎರಡು ಬಾರಿ ಶಾಸಕನಾಗಿ ದ್ದೇನೆ. ನನಗೆ ರಾಜಕೀಯದ ಇತಿಹಾಸವಿದೆ, ದುಡಿದಿದ್ದೇನೆ. ಆದರೆ, ಚಿರಪರಿಚಿತರಾಗಿರುವ ಜಿಗಜಿಣಗಿ ಯವರ ಮುಖವನ್ನೇ ಜನರು ಮರೆತಿದ್ದಾರಲ್ಲ, ಯಾಕೆಂದರೆ ಇವರು ಯಾರಿಗೆ ಮುಖ ತೋರಿಸಿದ್ದಾರೆ ಹೇಳಿ ಎಂದು ವ್ಯಂಗ್ಯವಾಡಿದರು.
ಯಾರು ಏನೇ ಮಾತಾಡಿದರೂ ಮತದಾರರಿಗೆ ಕಾಂಗ್ರೆಸ್ ಪಕ್ಷ ಜನಾನುರಾಗಿ ಅಂತ ಗೊತ್ತಾಗಿದೆ. ಅಭಿವೃದ್ಧಿ ಮಂತ್ರವಾಗಿಸಿ ಕೊಂಡು ಅವರ ಮುಂದೆ ನಾನೀಗ ನಿoತಿದ್ದೇನೆ. ಗೆಲುವು ಆಗೇ ಆಗುತ್ತದೆ, ಜನರ ಪ್ರತಿಕ್ರಿಯೆ-ಉತ್ಸಾಹದಿಂದ ಈ ಮಾತು ಹೇಳುತ್ತಿರುವೆ. ಗೆದ್ದರೆ ಅವರ ಋಣ ತೀರಿಸುತ್ತೇನೆ ಎಂದು ಹೇಳಿದರು.
ಏ:15ಕ್ಕೆ ಮತ್ತೆ ನಾಮಪತ್ರ:
ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತ ರೊಂದಿಗೆ ಏ:15 ರ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸುವು ದಾಗಿ ಆಲಗೂರ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರು ಸೇರಿದಂತೆ ಜಿಲ್ಲೆಯ ಎಲ್ಲಾ ಭಾಗಗಳಿಂದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಬರಲಿದ್ದಾರೆ ಎಂದರು.