ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ ನನ್ನು ರಕ್ಷಿಸಿದ 112 ಪೊಲೀಸ್ ಸಿಬ್ಬಂದಿ

ವಿಜಯ ಸಂಘರ್ಷ 
ಶಿವಮೊಗ್ಗ: ಪೊಲೀಸ್‌ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವ ಯುವಕನ ಜೀವ ಉಳಿದಿದೆ. ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ನಿನ್ನೆ ಭಾರಿ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು.

ರಸ್ತೆಯ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದ ವೇಳೆ ಪ್ರದೀಪ್‌ ಎಂಬವರು ತಮ್ಮ ಬೈಕ್‌ನಲ್ಲಿ ನ್ಯಾಮತಿಯ ದೊಡ್ಡೆತ್ತಿನಳ್ಳಿಯ ಕಡೆಗೆ ಹೊರಟಿದ್ದರು. ನೀರಿನ ರಭಸ ಅರಿಯದ ಅವರು ಅದೇ ರಸ್ತೆಯಲ್ಲಿ ಮುಂದಕ್ಕೆ ಹೋಗಿದ್ದರು. ಹರಿಯುವ ನೀರಿನ ರಬಸಕ್ಕೆ ಕೊಚ್ಚಿಕೊಂಡು ರಸ್ತೆಯ ಪಕ್ಕದಲ್ಲಿದ್ದ ಪ್ಲಾಂಟೇಷನೊಳಗೆ ಹೋಗಿದ್ದಾರೆ. ಈ ದೃಶ್ಯವನ್ನು ಕಂಡ ವ್ಯಕ್ತಿ ಯೊಬ್ಬರು 112 ನಂಬರ್​ಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇಷ್ಟಾಗುವ ಹೊತ್ತಿಗೆ ಗಂಟೆ ರಾತ್ರಿ 11.30 ಆಗಿತ್ತು.

ವಿಷಯ ತಿಳಿದ ಪೊಲೀಸ್​ ಸಿಬ್ಬಂದಿಗಳಾದ ರಂಗನಾಥ್‌ ಹಾಗೂ ಡ್ರೈವರ್‌ ಪ್ರಸನ್ನ 112ಕ್ಕೆ ಕರೆ ಮಾಡಿದ ವ್ಯಕ್ತಿಯನ್ನು ಸಂಪರ್ಕ ಮಾಡಲು ಯತ್ನಿಸಿದ್ದಾರೆ. ಆದರೆ, ಮಾಹಿತಿ ನೀಡಿದ್ದ ವ್ಯಕ್ತಿ ಫೋನ್​ ಸ್ವಿಚ್ಡ್​ ಆಫ್​ ಆಗಿತ್ತು. ಮೊದಲು ಫೇಕ್​ ಕಾಲ್‌ ಇರಬಹುದು ಎಂದು ಕೊಂಡಿದ್ದ ಸಿಬ್ಬಂದಿ ನಿರ್ಲಕ್ಷಿಸುವುದು ಮಾಡುವುದು ಬೇಡ ಎಂದು ಸಮರೋಪಾದಿ ಯಲ್ಲಿ ಸ್ಥಳಕ್ಕೆ ಧಾವಿಸಿದ್ದಾರೆ. ಆಗ ವೃದ್ಧ ರೊಬ್ಬರು ವ್ಯಕ್ತಿಯೊಬ್ಬನ ರಕ್ಷಣೆಗೆ ಮುಂದಾಗಿದ್ದು ಕಂಡು ಬಂದಿದೆ. ತಕ್ಷಣವೇ ವಾಹನದಿಂದ ಇಳಿದ ಸಿಬ್ಬಂದಿ ಖುದ್ದು ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರದೀಪ್‌, ಮರದ ಪೊಟರೆಯ ಬಳಿ ಆಸರೆ ಪಡೆದು ಸಹಾಯಕ್ಕಾಗಿ ಕೂಗುತ್ತಿದ್ದರು. ಆ ವೇಳೆ, ಅಲ್ಲಿಗೆ ಬಂದ ಸಿಬ್ಬಂದಿ ಅವರನ್ನ ರಕ್ಷಣೆ ಮಾಡಿದ್ದಾರೆ. ಆ ಬಳಿಕ ಪ್ರದೀಪ್‌ರ ಯೋಗಕ್ಷೇಮ ವಿಚಾರಿಸಿ, ಸುರಕ್ಷಿತವಾಗಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಮತ್ತೊಂದೆಡೆ, ಘಟನೆ ನಡೆದ ಜಾಗದಿಂದ ಸುಮಾರು ದೂರ ಕೊಚ್ಚಿ ಹೋಗಿದ್ದ ಬೈಕ್‌ ಮರವೊಂದರ ಬುಡದಲ್ಲಿ ಇಂದು ಪತ್ತೆಯಾಗಿದೆ. ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು