ವಿಜಯ ಸಂಘರ್ಷ
ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಈ ಬಾರಿ 3ನೇ ಸ್ಥಾನ ಗಳಿಸಿದೆ. ಉಡುಪಿ ಶೇ.94,ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಶೇ.88.67ರಷ್ಟು ಫಲಿತಾಂಶ ಪಡೆದು ಮೊದಲ 3 ಸ್ಥಾನ ಪಡೆದುಕೊಂಡಿವೆ. ಯಾದಗಿರಿ ಶೇ.50.59 ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ತವರು ಜಿಲ್ಲೆ ಶಿವಮೊಗ್ಗ ಕಳೆದ ಬಾರಿ 28ನೇ ಸ್ಥಾನದಲ್ಲಿತ್ತು. ಈ ಬಾರಿ 3ನೇ ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶ ದಲ್ಲಿ ದಾಖಲೆಯಾಗಲಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದ 23028 ವಿದ್ಯಾರ್ಥಿಗಳಲ್ಲಿ 20420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಡೀ ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ 3ನೇ ಸ್ಥಾನಗಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಡಿಡಿಪಿಐ ಪರಮೇಶ್ವರಪ್ಪ ಸಿ.ಆರ್. ಫಲಿತಾಂಶ ಹೆಚ್ಚಳಕ್ಕಾಗಿ ಅನೇಕ ಕ್ರಮ ಕೈಗೊಳ್ಳಲಾಗಿತ್ತು. ಮೊದಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಡಯಟ್ ಸಹಯೋಗ ದಲ್ಲಿ ಶೇ.70 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿದ್ದ ಶಾಲೆಗಳನ್ನು ಗುರುತಿಸ ಲಾಯಿತು. ವಿದ್ಯಾರ್ಥಿಗಳನ್ನು 3 ಭಾಗಗಳಾಗಿ ವಿಂಗಡಿಸಿ ಅವರ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಯಿತು ಎಂದರು.