ವಿಜಯ ಸಂಘರ್ಷ
ಭದ್ರಾವತಿ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆಸಂಬಂಧಿಸಿದಂತೆ ಮೇ:30ಕ್ಕೆ ಹಾಸನ ಚಲೋ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಐಟಿಯು ಸಂಚಾಲಕ ನಾರಾಯಣ ಹೇಳಿದರು.
ಮಹಿಳೆಯರ ಘನತೆ ಉಳಿಸಿ ಹಾಸನ ಗೌರವ ಕಾಪಾಡಿ ಎಂಬ ಸ್ಲೋಗನ್ ನ್ನೊಂದಿಗೆ ಬೃಹತ್ ಹೋರಾಟ ನಡೆಯಲಿದೆ. ಇದಕ್ಕೆ ಸಂಬಂಧಿಸಿ ದಂತೆ ಪೋಸ್ಟರ್ಗಳನ್ನೂ ಬಿಡುಗಡೆ ಮಾಡಲಾಗಿದೆ. ಮೇ 30ಕ್ಕೆ ಬೃಹತ್ ಹೋರಾಟ ನಡೆಯಲಿದೆ. ಇದರಲ್ಲಿ ಅನೇಕ ಹೋರಾಟಗಾರರು, ಸಾಹಿತಿಗಳು, ಚಿಂತಕರು ಹಾಗೂ ಪ್ರಗತಿಪರರು ಸೇರಿ ಸಹಸ್ರಾರು ಜನರು ಭಾಗಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.