ವಿಜಯ ಸಂಘರ್ಷ
ಕೆ.ಆರ್.ಪೇಟೆ: ಕಿಕ್ಕೇರಿ ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಸೊಳ್ಳೆಪುರ ಬಾಲಕೃಷ್ಣ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ರಾಜೇಶ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಬಯಸಿ ಕೆ.ಎನ್ ಪುಟ್ಟೇಗೌಡ. ಸೊಳ್ಳೆಪುರ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು.
ಕೊನೆ ಕ್ಷಣದಲ್ಲಿ ಕೆ.ಎನ್ ಪುಟ್ಟೇಗೌಡ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಕಣದಲ್ಲಿದ್ದ ಸೊಳ್ಳೆಪುರ ಬಾಲಕೃಷ್ಣ ಅವರನ್ನ ಚುನಾವಣೆ ಅಧಿಕಾರಿ ಅರುಣ್ ಕುಮಾರ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಘೋಷಿಸಿದರು.
ನೂತನ ಅಧ್ಯಕ್ಷರನ್ನ ಸನ್ಮಾನಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಸ್ ಪ್ರಭಾಕರ್ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ. ಪಂಚಾಯತಿ ಸದಸ್ಯರು ಹಾಗೂ ಎರಡು ಪಕ್ಷಗಳ ಮುಖಂಡರ ಸಹಕಾರದಿಂದ ಅಧ್ಯಕ್ಷರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಅದರ ಅನುಗುಣವಾಗಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯತಿಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತಾಸಕ್ತಿಯ ಅನುಗುಣವಾಗಿ ಕೆಲಸ ನಿರ್ವಹಿಸಬೇಕು. ತಮ್ಮ ಅವಧಿಯಲ್ಲಿ ಸಾರ್ವಜನಿಕರಿಗೆ ಸರ್ಕಾರದಿಂದ ಸಿಗಬಹುದಾದ. ನರೇಗಾ, ಆಶ್ರಯಮನೆ, ಕುಡಿಯುವ ನೀರು, ರಸ್ತೆ ಚರಂಡಿ,ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವುದರ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಸೊಳ್ಳೆಪುರ ಬಾಲಕೃಷ್ಣ,ಶಾಸಕ ಹೆಚ್.ಟಿ ಮಂಜು, ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ನಿರ್ದೇಶಕ ಚೋಳೆನಹಳ್ಳಿ ಪುಟ್ಟಸ್ವಾಮಿಗೌಡ,ಜಿ. ಪಂ ಮಾಜಿ ಸದಸ್ಯ ಕೆ.ಎಸ್ ಪ್ರಭಾಕರ್, ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ. ಎಂ ಕಿರಣ್ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ.ಪಕ್ಷ ಬೇಧ ಮರೆತು ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗೆ ನನ್ನ ಅವಧಿ ಯಲ್ಲಿ ಯಾವುದೇ ಲೋಪವಾಗದೆ ಸರ್ವ ಸದಸ್ಯರ ಸಹಕಾರದಿಂದ ಉತ್ತಮ ಆಡಳಿತ ನಡೆಸುತ್ತೇವೆ. ಎಲ್ಲಾ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕಾಯಿ ಮಂಜೇಗೌಡ, ಮುಖಂಡ ಐಕನಹಳ್ಳಿ ಕೃಷ್ಣಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೆಟ್ಟಹಳ್ಳಿ ಕೃಷ್ಣೇಗೌಡ ,ಗ್ರಾ. ಪಂ ಉಪಾಧ್ಯಕ್ಷೆ ಸರಸ್ವತಿ,ಸದಸ್ಯರಾದ ತಾಯಮ್ಮ,ರಾಜೇಶ್, ರೇಣುಕಮ್ಮ, ಕೆ.ಜಿ ಪುಟ್ಟರಾಜು,ಜ್ಯೋತಿ, ಚಂದ್ರಶೇಖರ, ಕೋಳಿ ಕೃಷ್ಣಪ್ಪ, ಭಾರತೀ, ಕಿಕ್ಕೇರಿ ಮತ್ತು ಸೊಳ್ಳೆಪುರ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
(✍️ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ