ವಿಜಯ ಸಂಘರ್ಷ
ಶಿವಮೊಗ್ಗ: ಮತದಾನದ ದಿನವೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಘವೇಂದ್ರ ಮತದಾರರಿಗೆ ವ್ಯಾಟ್ಸಪ್ ಕಾಲ್ ಮಾಡಿ ಈಶ್ವರಪ್ಪ ನಮ್ಮ ಪರ ಇದ್ದಾರೆ ಎಂದು ಹೇಳುತ್ತಿದ್ದಾರೆ. ನನ್ನ ರಾಜಕೀಯ ಇತಿಹಾಸ ದಲ್ಲಿ ಇಂತಹ ನೀಚ ರಾಜಕಾರಣ ನೋಡಿಲ್ಲ ಎಂದು ಈಶ್ವರಪ್ಪ ಗುಡುಗಿದ್ದಾರೆ.
ರಾಘವೇಂದ್ರ ಸೋಲುವ ಭಯದಿಂದ ಕೆಟ್ಟ ಷಡ್ಯಂತ್ರ, ಅಪಪ್ರಚಾರ ಮಾಡುತ್ತಿದ್ದಾರೆ. ಇದು ಇಡೀ ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಗೆಲ್ಲುತ್ತೇನೆ ಎನ್ನುವುದು ರಾಘವೇಂದ್ರಗೆ ಗೊತ್ತಾಗಿದೆ. ಇದೇ ಕಾರಣಕ್ಕೆ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ರಾಘವೇಂದ್ರ ಜಿಲ್ಲೆಯ ಮತದಾರರ ಕ್ಷಮೆ ಕೇಳಬೇಕು. ಪ್ರಜಾಪ್ರಭುತ್ವಕ್ಕೆ ದ್ರೋಹ ಮಾಡಿದ್ದಾರೆ. ಅವರು ಎಷ್ಟೇ ಷಡ್ಯಂತ್ರ ಮಾಡಿದರೂ ನಾನು 2 ಲಕ್ಷ ಮತಗಳ ಅಂತರದಿoದ ಗೆಲ್ಲುತ್ತೇನೆ. ನಾನು ಪ್ರಧಾನಿ ಮೋದಿ ಅವರ ಕೈ ಬಲಪಡಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.