ಅವಳಿ ಕಾರ್ಖಾನೆಗಳ ಉಳಿವಿನಿಂದ ಮಾತ್ರ ಜಿಲ್ಲೆ ಅಭಿವೃದ್ಧಿ ಸಾಧ್ಯ

ವಿಜಯ ಸಂಘರ್ಷ 
ಭದ್ರಾವತಿ: ನಗರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಆರಂಭವಾಗದ ಹೊರತು ಭದ್ರಾವತಿ ಸೇರಿದಂತೆ ಜಿಲ್ಲೆಯ ಪೂರ್ಣ ಪ್ರಮಾಣದ ಅಭಿವೃದ್ಧಿ ಅಸಾಧ್ಯ ಎಂದು ಪಕ್ಷೇತರ ಅಭ್ಯರ್ಥಿ ಜಾನ್ ಬೆನ್ನಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. 

ರಾಜಕೀಯ ಪಕ್ಷಗಳ ಬಗ್ಗೆ ಮತದಾರ ವಿಶ್ವಾಸ ಕಳೆದು ಕೊಂಡಿರುವ ಕಾರಣ ಕೈಗಾರಿಕೆ, ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಎಲ್ಲ ರಂಗಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶ ಹೊಂದಿದ್ದೇನೆ. 

ಬಗರ್ ಹುಕುಂ ಸಾಗುವಳಿ ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರ ಹಾಗೂ ಮೂಲಸೌಕರ್ಯ ಕಲ್ಪಿಸುವ ಮೂಲಕ ಮಾದರಿ ಜಿಲ್ಲೆಯಾಗಿ ರೂಪಿಸಬೇಕೆಂಬ ಮಹತ್ವಾಕಾಂಕ್ಷೆ ಇದೆ ಎಂದರು.

ಕುಮಾರ್, ಚಂದ್ರು, ನಾಗರಾಜ್, ಸ್ಟೀಫನ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು