ಪದವೀಧರ-ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಾಳೆ ಕೊನೆ ದಿನ

ವಿಜಯ ಸಂಘರ್ಷ 
ಭದ್ರಾವತಿ: ವಿಧಾನ ಪರಿಷತ್ ನ 6 ಸ್ಥಾನ ಗಳಿಗೆ ಚುನಾವಣೆ ಘೋಷಣೆ ಯಾಗಿದ್ದು, ಜೂ: 3 ರಂದು ಮತದಾನ ನಡೆಯಲಿದೆ.

ಭಾರತ ಚುನಾವಣಾ ಆಯೋಗದ ಸೂಚನೆ ಗಳಂತೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮೇ.6 ಕೊನೆಯ ದಿನವಾಗಿರುತ್ತದೆ. 

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಚ್ಚಿಸುವ ಅರ್ಜಿದಾರರು ನಮೂನೆ 18 ಮತ್ತು ನಮೂನೆ 19ರಲ್ಲಿ ಅಗತ್ಯ ದಾಖಲಾತಿ ಗಳೊಂದಿಗೆ ಮೇ. 6 ರಂದು ಸಂಜೆ 5 ಗಂಟೆಯೊಳಗೆ ತಹಶೀಲ್ದಾರ್ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಾಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಕೆ.ಆರ್ ನಾಗರಾಜ್ ಪ್ರಕಟಣೆಯಲ್ಲಿ ಕೋರಿದ್ದಾರೆ. 

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ.  

 ಮೇ. 9 ರಂದು ನಾಮಪತ್ರ ಸಲ್ಲಿಕೆ ಆರಂಭ ವಾಗಲಿದೆ. ಮೇ 16ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮೇ.17 ರಂದು ನಾಮಪತ್ರಗಳ ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪಡೆಯಲು ಮೇ 20 ಕಡೆಯ ದಿನಾಂಕವಾಗಿದೆ. 

ಜೂ- 3 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು ಜೂ- 6 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು