ವಿಜಯ ಸಂಘರ್ಷ
ತೀರ್ಥಹಳ್ಳಿ: ಮುಂದೆ ಸಾಗುತ್ತಿದ್ದ ವಾಹನ ವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಮಂಡಗದ್ದೆಯ 15ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ.
ಖಾಸಗಿ ಬಸ್ಸು ಕಳಸದಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಓವರ್ ಟೇಕ್ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಬಲ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
High speed technology of drivers ( now a days all most all )
ಪ್ರತ್ಯುತ್ತರಅಳಿಸಿ