ವಿಜಯ ಸಂಘರ್ಷ
ಭದ್ರಾವತಿ: ಕರ್ನಾಟಕದಲ್ಲಿ ಜನಪರವಾದ ಗ್ಯಾರಂಟಿ ಯೋಜನೆಗೆ ಎಲ್ಲರೂ ಆಶೀರ್ವಾದ ಮಾಡಬೇಕು, ಅಭಿವೃದ್ಧಿ ಮಾಡುವ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ನಗರಸಭಾ ಮಾಜಿ ಸದಸ್ಯ ಫ್ರಾನ್ಸಿಸ್ ಹೇಳಿದರು.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಈ ಬಾರಿ ಗೀತಾ ಶಿವರಾಜ್ ಕುಮಾರ್ ಗೆಲುವು ಸಾಧಿಸಲಿದ್ದಾರೆ. ಜನಪರವಾದ ಸರ್ಕಾರಕ್ಕೆ ಜನರು ಬೆಂಬಲ ನೀಡಲಿದ್ದಾರೆ. ನಾನು ನನ್ನ ಮತವನ್ನು ಚಲಾಯಿಸುವ ಮೂಲಕ ಎಲ್ಲರೂ ತಪ್ಪದೆ ಮತ ಚಲಾಯಿಸಿ ಎಂದರು.