ವಿಜಯ ಸಂಘರ್ಷ
ಭದ್ರಾವತಿ: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಸುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಹಿರಿಯ ಅನುಭವಿ ರಾಜಕಾರಣಿ ಆಯನೂರು ಮಂಜುನಾಥ್ ರನ್ನು ಕಾಂಗ್ರೆಸ್ ಪಕ್ಷದಿಂದ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಎಲ್ಲಾ ಕ್ಷೇತ್ರ ಗಳಿಂದಲೂ ಆಯ್ಕೆಯಾಗಿ ಸಾಕಷ್ಟು ಅನುಭವ ಹೊಂದಿರುವ ಆಯನೂರು ಮಂಜುನಾಥ್ ಪದವೀಧರರ ಸಮಸ್ಯೆ ಗಳಿಗೆ ಪೂರಕವಾಗಿ ಸ್ಪಂದಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿರುವ ಪದವೀಧರರು ತಮ್ಮ ಮತ ಚಲಾಯಿಸಿ ಅವರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ, ಚುನಾವಣಾ ಉಸ್ತುವಾರಿ ರಂಗಸ್ವಾಮಿ, ಮುಖಂಡರಾದ ಎಸ್. ಮಣಿಶೇಖರ್, ವೈ.ರೇಣುಕಮ್ಮ, ಸರ್ವಮಂಗಳ ಭೈರಪ್ಪ, ಕಾಂತರಾಜ್, ಶೃತಿ ವಸಂತಕುಮಾರ್, ಅಮೀರ್ ಜಾನ್, ಬಿ. ಗಂಗಾಧರ್ಸೇರಿ ಇನ್ನಿತರರಿದ್ದರು.