ವಿಜಯ ಸಂಘರ್ಷ
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಜನ ಸಂಪರ್ಕ ಸಭೆಯನ್ನು ಮೇ: 23 ರ ಗುರುವಾರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಭಾಗೀಯ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮುಂತಾದ ಅಧಿಕಾರಿಗಳ ಸಮಕ್ಷಮ ಗ್ರಾಮೀಣ ಭಾಗದ ಕುಂದುಕೊರತೆ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಬಗೆಹರಿಸಲಾಗುವುದು.
ಆದ್ದರಿಂದ ಕಾರೇಹಳ್ಳಿ, ಬಾರಂದೂರು, ಅಂತರಗಂಗೆ, ದೊಡ್ಡರಿ, ಬಿಆರ್ಪಿ, ದೊಣಬಘಟ್ಟ, ತಡಸ, ಬಿಳಿಕಿ, ಅರಳಿಕೊಪ್ಪ, ಕಂಬದಾಳ್ ಹೊಸೂರು, ಅರಳಿಹಳ್ಳಿ, ಕೂಡ್ಲಿಗೆರೆ, ಅತ್ತಿಗುಂದ, ವೀರಾಪುರ, ಕಲ್ಲಹಳ್ಳಿ ಸುತ್ತಮುತ್ತಲ ಗ್ರಾಹಕರು ಸಭೆಗೆ ಹಾಜರಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.