ವಿಜಯ ಸಂಘರ್ಷ
ಕೆ.ಆರ್.ಪೇಟೆ: ತಾಲೂಕಿನ ಸಮಾಜ ಸೇವಕ ಹಾಗೂ ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಅಧ್ಯಕ್ಷ
ಆರ್ ಟಿಓ ಮಲ್ಲಿಕಾರ್ಜುನ್ ಅವರ 51ನೇ ಹುಟ್ಟುಹಬ್ಬವನ್ನು ಅಭಿಮಾನಿ ಗಳ ಬಳಗದ ವತಿಯಿಂದ ಪಟ್ಟಣದ ಜಯನಗರ ಬಡಾವಣೆಯ ನಳಂದ ಸ್ಕೂಲ್ ಸಮೀಪ ಅದ್ದೂರಿಯಾಗಿ ಆಚರಿಸಲಾಯಿತು.
ಕೆ.ಆರ್.ನಗರ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ ಶ್ರೀ ಶಿವಾನಂದಪುರಿ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಮಲ್ಲಿಕಾರ್ಜುನ್ ಅವರಂತಹ ಪ್ರಾಮಾಣಿಕ ಕಳಕಳಿ ಹೊಂದಿರುವ ದಕ್ಷ ಅಧಿಕಾರಿಗಳು ಇಂದಿನ ಸಮಾಜಕ್ಕೆ ಬೇಕಾಗಿದ್ದಾರೆ. ಸರಳತೆ, ಸಜ್ಜನಿಕೆ, ಬಡ ಜನರು ಹಾಗೂ ವಿದ್ಯಾರ್ಥಿಗಳ ಬಗ್ಗೆ ಹೊಂದಿರುವ ಕಾಳಜಿ ಹೊಂದಿರುವ ಜನರು ವಿರಳವಾಗುತ್ತಿರುವ ಸಮಯದಲ್ಲಿ ಮಲ್ಲಿಕಾರ್ಜುನ ಅವರು ಬೆಳ್ಳಿ ಚುಕ್ಕಿಯಂತೆ ಪ್ರಜ್ವಲಿಸುತ್ತಿದ್ದಾರೆ ಎಂದರು.
ಸಮಾಜ ಸೇವಾ ಚಟುವಟಿಕೆಗಳ ಮೂಲಕ ಕೆ.ಆರ್.ಪೇಟೆ ತಾಲೂಕಿನಲ್ಲಿ ಜನಪ್ರಿಯ ರಾಗಿರುವ ಮಲ್ಲಿಕಾರ್ಜುನ್ ವಿದ್ಯಾರ್ಥಿ ಗಳೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಗ್ರಾಮೀಣ ವಿದ್ಯಾರ್ಥಿಗಳ ನೈಜ ಪ್ರತಿಭೆಯನ್ನು ಪ್ರೋತ್ಸಾಹಿಸಿ ಸಂಭ್ರಮಿಸುತ್ತಿದ್ದಾರೆ. ಅವರಂತಹ ಆದರ್ಶ ವ್ಯಕ್ತಿತ್ವ ಹೊಂದಿರುವ ಜನರು ಇಂದಿನ ಸಮಾಜಕ್ಕೆ ಅವಶ್ಯಕವಾಗಿ ಬೇಕಾಗಿದ್ದಾರೆ ಎಂದು ತಿಳಿಸಿ ಶ್ರೀ ಮಠದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಆದಿಚುಂಚನಗಿರಿ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ಸ್ವಾರ್ಥವೇ ತುಂಬಿರುವ ಇಂದಿನ ಸಮಾಜ ದಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡುವ ಮಲ್ಲಿಕಾರ್ಜುನ್ ಅವರಂತಹ ಹೃದಯವಂತರಾಗಿದ್ದಾರೆ.
ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚ ದಲ್ಲಿ ಎದುರಾಗುವ ಜಾಗತಿಕ ಸವಾಲುಗಳು ಹಾಗೂ ಸ್ಪರ್ಧೆಗಳನ್ನು ಎದುರಿಸಿ ಮುನ್ನಡೆ ಯಲು ಯುವ ಜನರು ಆತ್ಮವಿಶ್ವಾಸದಿಂದ ಸಜ್ಜಾಗಬೇಕು, ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ಸತ್ಯ ಅರಿತು ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಗುರಿಸಾಧನೆ ಮಾಡಿ ತಂದೆ ತಾಯಿಗಳು ಮತ್ತು ಗುರು ಹಿರಿಯರಿಗೆ ಕೀರ್ತಿ ತರಬೇಕು ಎಂದು ಡಾ.ಜೆ.ಎನ್. ರಾಮಕೃಷ್ಣೇಗೌಡ ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್.ಟಿ.ಓ ಮಲ್ಲಿಕಾರ್ಜುನ್ ರವರು ಅನಗತ್ಯವಾಗಿ ದುಂದು ವೆಚ್ಚಮಾಡಿಕೊಂಡು ಹಣ ಪೋಲು ಮಾಡಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ವಿದ್ಯಾರ್ಥಿಗಳ ಸಂಭ್ರಮ ದಲ್ಲಿ ಭಾಗಿಯಾಗಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡು ಸಂಭ್ರಮಿಸು ತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅಂಕಗಳಿಕೆಯೊಂದೆ ಮಾನದಂಡವಲ್ಲ ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಜೊತೆಗೆ ಲೋಕಜ್ಞಾನವನ್ನು ಅರಿತುಕೊಂಡು ಸಮಗ್ರವಾಗಿ ತಮ್ಮ ವ್ಯಕ್ತಿತ್ವ ವನ್ನು ಸಾಧನೆ ಮಾಡಬೇಕು ಎಂದರು.
ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಹೊರರೋಗಿಗಳಿಗೆ ಹಣ್ಣು ವಿತರಿಸಿ ಮಾತನಾಡಿದ ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನಬಸಪ್ಪ, ತಾಲ್ಲೂಕಿನಾದ್ಯಂತ ಸಮಾಜ ಸೇವೆಯನ್ನು ಕಳೆದ ಮೂರು ವರ್ಷಗಳಿಂದ ದೇವಾಲಯ ಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ,ಬಡರೋಗಿಗಳಿಗೆ ಚಿಕಿತ್ಸೆಗೆ ನೆರವು, ವಾಲಿಬಾಲ್, ಕ್ರಿಕೆಟ್ ಪಂದ್ಯಾವಳಿಗಳಿಗೆ ಆರ್ಥಿಕ ನೆರವು,ಪೌರಾಣಿಕ ನಾಟಕಗಳಿಗೆ ಪ್ರೋತ್ಸಾಹ ನೀಡುವುದಲ್ಲದೆ ಕಲಾವಿದರನ್ನು ಗೌರವಿಸುವುದು.ಉನ್ನತ ವ್ಯಾಸಂಗವನ್ನು ಮಾಡುವ ಬಡ ವಿದ್ಯಾರ್ಥಿ ಗಳಿಗೆ ಆರ್ಥಿಕ ನೆರವು. ಅಲ್ಲದೆ ಅವರ ಹುಟ್ಟುಹಬ್ಬದ ಅಂಗವಾಗಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರೌಢಶಾಲೆಯ ಪರೀಕ್ಷೆಯಲ್ಲಿ ಹಾಗೂ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಕಲೆ,ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುತ್ತಾ ನಿರಂತರವಾಗಿ ಮಾಡುತ್ತ ಬರುತ್ತಿರುವ ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ ಆಯಸ್ಸನ್ನು ನೀಡಿ ಇನ್ನಷ್ಟು ಸಮಾಜ ಸೇವೆಯನ್ನು ಮಾಡಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು.
ವ್ಯಕ್ತಿತ್ವ ವಿಕಾಸನ ಮಾರ್ಗದರ್ಶಕ ಶಂಕರ್ ಬೆಳ್ಳೂರು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಕೆ.ಆರ್. ನಗರ ಶಾಖಾ ಮಠದ ಶ್ರೀ. ಶಿವಾನಂದಪುರಿ ಸ್ವಾಮೀಜಿ, ವಿಭಾಗಿಯ ಸಾರಿಗೆ ಅಧಿಕಾರಿ ಸಿ.ಟಿ.ಮೂರ್ತಿ, ಕಾಗಿನೆಲೆ ಮಠದ ಅರುಣ ಸಿದ್ದೇಶ್ವರ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಬೇಬಿ ಬೆಟ್ಟದ ಶ್ರೀ ಶಿವಬಸವ ಸ್ವಾಮೀಜಿ, ತೆಂಡೆಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಕುರಿತು ಮಾತನಾಡಿದರು.
ಪಟ್ಟಣದ ಸೈ ಮತ್ತು ಸಾನ್ವಿ ನೃತ್ಯ ಶಾಲೆಯ ಮಕ್ಕಳು ನೀಡಿದ ಆಕರ್ಷಕ ನೃತ್ಯ ಪ್ರದರ್ಶನವು ಸಾರ್ವಜನಿಕರನ್ನು ರಂಜಿಸಿತು.
ಪಂಡಿತ ಪಂಚಾಕ್ಷರಿ ಗಾನಯೋಗಿ ತಂಡದ ಶ್ರೀಕಾಂತ್ ಚಿಮ್ಮಲ್ ಮತ್ತು ರವಿ ಶಿವಕುಮಾರ್ ನೇತೃತ್ವದ ತಂಡವು ನೀಡಿದ ಸುಗಮ ಸಂಗೀತ ಕಾರ್ಯಕ್ರಮ ಮನಸೂರೆಗೊಂಡಿತು
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಕೆ.ರವಿ.ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ,ರಾಜ್ಯ ಸಹಕಾರ ಮಹಾ ಮಂಡಳಿ ನಿರ್ದೇಶಕ ಶೀಳನೆರೆ ಮೋಹನ್, ಎಂ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಹೆಚ್.ಕೆ ಅಶೋಕ್,ಮಂಡ್ಯ ಆರ್.ಟಿ.ಓ ಹೇಮಾವತಿ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ರಮೇಂದ್ರ, ಟೊಯೋಟಾ ಕಿರ್ಲೊಸ್ಕರ್ ಕಂಪನಿಯ ಇಂಜಿನಿಯರ್ ರಮೇಶ್, ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ಶಶಿಧರ್,ಮುಖಂಡರಾದ ಪೋಲೀಸ್ ಶಶಿಧರ್( ಬಾಬಣ್ಣ) ಮಯೂರ್, ಶರತ್ ಚಂದ್ರ ಹೆಗಡೆ, ಕೆ.ಎನ್.ಕಿರಣ್(ಗುಂಡ) ರಾಘವೇಂದ್ರ ಪ್ರಸಾದ್,ಚನ್ನೇಗೌಡ, ಉಧ್ಯಮಿ ಕೆ.ಸುರೇಶ್, ಮಹಾರಾಷ್ಟ್ರ ಕುರುಬರ ಸಂಘದ ಅಧ್ಯಕ್ಷ ಯೋಗೇಶ್ ಗೌಡ, ಜಿಲ್ಲಾ ಕರವೇ ಅಧ್ಯಕ್ಷ ಡಿ.ಎಸ್.ವೇಣು, ತಾಲ್ಲೂಕು ಕರವೇ ಅಧ್ಯಕ್ಷ ಟೆಂಪೋ ಶ್ರೀನಿವಾಸ್, ತಾಲ್ಲೂಕು ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಎಚ್.ಆರ್.ಸೋಮಶೇಖರ್, ತಾಲ್ಲೂಕು ಕರವೇ ಸ್ವಾಭಿಮಾನಿ ಸೇನೆ ಅಧ್ಯಕ್ಷ ಸಮೀರ್, ಜಿಲ್ಲಾ ಉಪಾಧ್ಯಕ್ಷ ಎ.ಸಿ.ಕಾಂತರಾಜು, ಮಡುವಿನಕೋಡಿ ಉಮೇಶ್, ಆದಿಹಳ್ಳಿ ರಮೇಶ್, ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ತಾಲ್ಲೂಕು ಅಧ್ಯಕ್ಷ ಗಂಜಿಗೆರೆ ಮಹೇಶ್ ಸೇರಿದಂತೆ ಸಾವಿರಾರು ಮಂದಿ ಪೋಷಕರು, ಅಭಿಮಾನಿಗಳು ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.
ತಾಲೂಕಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಗೌರವಿಸಲಾಯಿತು.
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ