ಹೆಚ್.ಡಿ.ಕುಮಾರಸ್ವಾಮಿ ಜನನಾಯಕ ಎಂಬುದು ಎಂಪಿ ಚುನಾವಣೆಯಲ್ಲಿ ಸಾಬೀತು: ಹೆಚ್.ಟಿ ಮಂಜು

ವಿಜಯ ಸಂಘರ್ಷ 
ಕೆ.ಆರ್.ಪೇಟೆ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಮತಗಳಿಸಿ ನೂತನ ಸಂಸದರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರವರ ಗೆಲುವು ಜೆಡಿಎಸ್ -ಬಿಜೆಪಿ ಪಕ್ಷದ ಕಾರ್ಯಕರ್ತರ ಗೆಲುವು ಹಾಗೂ ಪಕ್ಷಾತೀತ ವಾಗಿ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಮತದಾರರ ಗೆಲುವು ಎಂದು ಶಾಸಕ ಹೆಚ್.ಟಿ ಮಂಜು ತಿಳಿಸಿದರು.

ಅವರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಜನನಾಯಕ ಎಂಬುದು ಲೋಕಸಭಾ ಚುನಾವಣೆಯಲ್ಲಿ 8,51881 ಒಟ್ಟು ಮತ ಗಳಿಸಿ 2,84620 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಫಲಿತಾಂಶದೊಂದಿಗೆ ನಮ್ಮ ಜಿಲ್ಲೆಯ ಮತದಾರರು ನಿಜವಾದ ಜನನಾಯಕ ನನ್ನು ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಇದು ಸತ್ಯಕ್ಕೆ ಸಂದ ಜಯವಾಗಿದೆ. ಕುಮಾರಸ್ವಾಮಿ ಅವರಿಗೆ ಸದಾ ಜನ ಬೆಂಬಲ ಇರುತ್ತದೆ ಎಂಬುದು ಸಾಬೀತಾ ಗಿದೆ ಮತ್ತು ಅವರನ್ನು ಸೋಲಿಸಲು ಕಾಣದ ಕೈಗಳು ಕುತಂತ್ರ ನಡೆಸಿದ್ದವು. 

ಅಂತಹವರಿಗೆ ಕಾಂಗ್ರೆಸ್ ಸರ್ಕಾರ ಬೆಂಬಲವಾಗಿತ್ತು. ಆದರೆ ಜನರ ಆಶೀರ್ವಾದದ ಮುಂದೆ ಯಾವ ಮಂತ್ರ- ತಂತ್ರ, ಕುತಂತ್ರವೂ ಫಲ ನೀಡಿಲ್ಲ. ಜನರ ಮನಸ್ಸಿನಲ್ಲಿ ಹೆಚ್‌ಡಿಕೆ ಗಳಿಸಿರುವ ಶಾಶ್ವತ ಸ್ಥಾನವನ್ನು ಯಾರಿಂದಲೂ ಅಳಿಸಲು ಸಾಧ್ಯವಿಲ್ಲ.ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕರ್ನಾಟಕದ ಆಸ್ತಿ. ಇವರ ರಾಜಕೀಯ ಜೀವನಕ್ಕೆ ಕಪ್ಪುಚುಕ್ಕೆ ಬಳಿಯಬೇಕೆಂದು ಹಲವು ಷಡ್ಯಂತ್ರ ನಡೆದವು. ಆದರೆ ಜನರು ಅದ್ಯಾವುದಕ್ಕೂ ಸೊಪ್ಪು ಹಾಕದೆ ಮತ್ತೊಮ್ಮೆ ಗೌಡರ ಕುಟುಂಬಕ್ಕೆ ಆಶೀರ್ವದಿಸಿದ್ದಾರೆ. 

ಮಂಡ್ಯ ಜೆಡಿಎಸ್‌ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ಅಲ್ಲದೆ ಮಾಜಿ ಸಚಿವ ಕೆ.ಸಿ ನಾರಾಯಣಗೌಡರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮದಿಂದಾಗಿ ಪಕ್ಷಾತೀತವಾಗಿ ಬೆಂಬಲಿಸಿದ ಜನರ ಸಹಕಾರದಿಂದ ನಮ್ಮ ತಾಲ್ಲೂಕಿನಲ್ಲಿ ಹೆಚ್ಡಿಕೆ ಗೆ 1.00170 ಮತ ನೀಡಿ ಎದುರಾಳಿಗಿಂತ 26522 ಮತ ಗಳಿಸಲು ಸಾಧ್ಯವಾಯಿತು.ಮುಖ್ಯಮಂತ್ರಿಯಾಗಿ ಜನರ ಮನೆ ಬಾಗಿಲಿಗೆ ಹೋಗಿ ಸೇವೆ ಮಾಡಿದ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮೋದಿ ಅವರ ಸಚಿವ ಸಂಪುಟದಲ್ಲಿ ಉನ್ನತ ಸ್ಥಾನ ಪಡೆಯುವುದು ನಿಶ್ಚಿತ ಎಂದ ಅವರು ಮತ ನೀಡಿದ ಮತದಾರರಿಗೆ ಧನ್ಯವಾದ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎ.ಎನ್ ಜಾನಕಿರಾಮ್, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕೆ.ರವಿ (ಡಾಲು ರವಿ), ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಶೀಳನೆರೆ ಮೋಹನ್, ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕ ಎಂ.ಬಿ ಹರೀಶ್,ತಾ.ಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಜೆಡಿಎಸ್ ಕಾನೂನು ಘಟಕದ ತಾಲ್ಲೂಕು ಅಧ್ಯಕ್ಷ ವಿ.ಎಸ್ ಧನಂಜಯ್ ಕುಮಾರ್, ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಲದೇವ್, ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ,ಸಂತೆಬಾಚಹಳ್ಳಿ ಹೋಬಳಿಯ ಜೆಡಿಎಸ್ ಅಧ್ಯಕ್ಷ ರವಿ ಕುಮಾರ್, ಅಕ್ಕಿಹೆಬ್ಬಾಳು ಹೋಬಳಿಯ ಜೆಡಿಎಸ್ ಅಧ್ಯಕ್ಷ ಬಸವಲಿಂಗಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಈರೇಗೌಡ, ಪುರಸಭಾ ಮಾಜಿ ಸದಸ್ಯ ಹೇಮಂತ್ ಕುಮಾರ್,ಗ್ರಾ.ಪಂ ಮಾಜಿ ಅಧ್ಯಕ್ಷ ಬೈರಪುರ ಹರೀಶ್,ಶಾಸಕ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್,ಯುವ ಮುಖಂಡರಾದ ಬಳ್ಳೆಕೆರೆ ಕುಮಾರ್,ಹೆಗ್ಗಡಹಳ್ಳಿ ಅಲೋಕ್ ಕುಮಾರ್, ಚಟ್ಟೆನಹಳ್ಳಿ ದೀಪು, ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ಇತರರಿದ್ದರು.

(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು