ವಿಐಎಸ್ ಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಭೇಟಿ: ಕಾರ್ಮಿಕ ವಲಯದಲ್ಲಿ ಹೊಸ ಭರವಸೆ

ವಿಜಯ ಸಂಘರ್ಷ 
ಭದ್ರಾವತಿ: ಕೇಂದ್ರ ಸರ್ಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಗೆ ಭಾನುವಾರ ಕೇಂದ್ರ ಬೃಹತ್ ಕೈಗಾರಿಕೆ – ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರ ಸ್ವಾಮಿ ಭೇಟಿ ನೀಡಿ ಕೂಲಂಕಷವಾಗಿ ಪರಿಶೀಲನೆ ನಡೆಸಿದರು.

ನಷ್ಟದ ಹಾದಿ: ಪ್ರಸಿದ್ದ ಕಾರ್ಖಾನೆಗಳಲ್ಲಿ ಒಂದಾಗಿರುವ ವಿಐಎಸ್ಎಲ್ ಕಾರ್ಖಾನೆ ಯಲ್ಲಿ ಸಾವಿರಾರು ಜನರಿಗೆ ಉದ್ಯೋಗ ನೀಡಿತ್ತು. ಆದರೆ ಕಾಲಾಂತರದಲ್ಲಿ ಕಾರ್ಖಾನೆಯು ನಷ್ಟದ ಹಾದಿ ಹಿಡಿದು ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು.

 ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗಳಿಗೂ ಚಾಲನೆ ದೊರಕಿತ್ತು. ಟೆಂಡರ್ ಆಹ್ವಾನಿಸಿತ್ತು. ಆದರೆ ಬಿಡ್ ದಾರರು ಆಸಕ್ತಿ ವ್ಯಕ್ತಪಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಖಾಸಗೀಕರಣ ಪ್ರಕ್ರಿಯೆ ಕೈಬಿಟ್ಟು, ಕಾರ್ಖಾನೆ ಮುಚ್ಚುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿತ್ತು. ಈ ನಡುವೆ ಕಾರ್ಖಾನೆ ಪುನಾರಾರಂಭಕ್ಕೆ ಕ್ರಮಕೈಗೊಳ್ಳಬೇಕೆಂದು ಗುತ್ತಿಗೆ ಕಾರ್ಮಿಕರು ಕಳೆದ 529 ದಿನಗಳಿಂದ ಇಂದಿನವರೆವಿಗೂ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿದ್ದಾರೆ. 

ಹೊಸ ನಿರೀಕ್ಷೆ : ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವರಾದ ನಂತರ, ಕಾರ್ಖಾನೆಯು ಪೂರ್ಣ ಪ್ರಮಾಣದಲ್ಲಿ ಪುನಾರಾರಂಭದ ಹೊಸ ನಿರೀಕ್ಷೆಗಳು ಗರಿಗೆದರುವಂತೆ ಮಾಡಿವೆ. ಹೆಚ್.ಡಿ.ಕೆ ಕೂಡ ಸಚಿವರಾದ ಕೆಲ ದಿನಗಳಲ್ಲಿಯೇ, ವಿಐಎಸ್ಎಲ್ ಕಾರ್ಖಾನೆ ಪುನರುಜ್ಜೀವನಕ್ಕೆ ಸಂಬಂಧಿಸಿದಂತೆ ಕೇಂದ್ರ ಉಕ್ಕು ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಮಾಲೋಚಿಸಿದ್ದರು.

ಒಟ್ಟಾರೆ ಕೇಂದ್ರದ ನೂತನ ಸಚಿವರಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಾರ್ಖಾನೆಗೆ ಭೇಟಿ ನೀಡಿರುವುದು ಕಾರ್ಮಿಕ ವಲಯದಲ್ಲಿ ಹೊಸ ಭರವಸೆ ನೀಡಿದೆ. ಅಲ್ಲದೆ ಸ್ಥಳೀಯ ಶಾಸಕ ಬಿ.ಕೆ.ಸಂಗಮೇಶ್ವರ್ ಸಹ ಕೇಂದ್ರ ಸಚಿವರಲ್ಲಿ ಕಾರ್ಖಾನೆ ಉಳಿವಿಗಾಗಿ ಬಂಡವಾಳ ತೊಡಗಿಸಲು ಒತ್ತಡ ಏರಿರುವುದು ಕಾರ್ಮಿಕರಲ್ಲಿ ಉತ್ಸುಕತೆ ಕಂಡುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು