ವಿಜಯ ಸಂಘರ್ಷ
ಕೆ.ಆರ್.ಪೇಟೆ: ಮೈಸೂರು ಪ್ರಾಂತ್ಯದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಮತ್ತು ಆಡಳಿತ ವೈಖರಿ ಇಂದಿನ ಜನಪ್ರತಿ ನಿಧಿಗಳಿಗೆ ಮಾದರಿ ಯಾಗಿರುವ ಮಹಾನ್ ಸಾಧಕರ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶ್ರೀ ಧರ್ಮಸ್ಥಳ ಸಂಯೋಜನಾ ಧಿಕಾರಿ ತಿಲಕ್ ರಾಜ್ ತಿಳಿಸಿದರು.
ಪಟ್ಟಣದಲ್ಲಿರುವ ಕೃಷ್ಣ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಮತ್ತು ಸರ್ವಜನರ ಅಭಿವೃದ್ಧಿ ಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲಘಟ್ಟದಲ್ಲಿ ಅಪಾರ ಶ್ರಮಿಸಿದ್ದಾರೆ. ರಾಜಾಡಳಿತ ವ್ಯವಸ್ಥೆ ಯಲ್ಲಿ ಮೈಸೂರು ಒಡೆಯರ್ ಮನೆತನದ ಸಾಧನೆಗಳು ಜನಮಾನ ದಲ್ಲಿ ಈಗಲೂ ಅಚ್ಚಳಿಯದೆ ಉಳಿದಿವೆ. ಒಡೆಯರ್ ಮನೆತನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವಧಿಯಲ್ಲಿ ಏಷ್ಯ ಖಂಡವೇ ಅಚ್ಚರಿ ಗೊಳ್ಳುವಂತಹ ಅಭಿವೃದ್ಧಿ ಯೋಜನೆ ಗಳು ರೂಪುಗೊಂಡವು ಎಂದು ಸ್ಮರಿಸಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್. ಆರ್ ಪೂರ್ಣಚಂದ್ರ ತೇಜಸ್ವಿ ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸಂಸ್ಥಾಪನೆ ಗೊಳ್ಳಲು ಪ್ರಮುಖ ಕಾರಣರಾಗಿದ್ದರು. ಆಗಿನಿಂದ ಇಂದಿನವರೆಗೂ ಹಲವು ಮಹನೀಯರು ಕನ್ನಡ ಕಟ್ಟುವ ಕಾರ್ಯದಲ್ಲಿ ತೊಡಗಿ ಕನ್ನಡ ನಾಡು, ನುಡಿ ಬೆಳವಣಿಗೆಗೆ ನೆರವಾಗಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯ ರಕ್ಷಣೆಗಾಗಿ ದುಡಿದವ ರನ್ನು ಸ್ಮರಿಸುವ ಮೂಲಕ ಎಲ್ಲರೂ ಕನ್ನಡಕ್ಕಾಗಿ ಕೈ ಎತ್ತಿ ನಾಡು-ನುಡಿಯ ರಕ್ಷಣೆಗೆ ಕಂಕಣಬದ್ಧರಾಗಿರಬೇಕು ಎಂದರು.ಕನ್ನಡ ನಾಡಿನಲ್ಲಿ ಕೈಗಾರಿಕೆ, ವಿದ್ಯೆ, ಕೃಷಿಗೆ ಆದ್ಯತೆ ನೀಡಿದ್ದ ಅವರು, ಮೈಸೂರು ಸಂಸ್ಥಾನದಲ್ಲಿ ಬೃಹತ್ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂದು ಭದ್ರಾವತಿಯ ಕಾಗದದ ಕಾರ್ಖಾನೆ, ಶಿವನಸಮುದ್ರ ಜಲ ವಿದ್ಯುತ್ ಘಟಕ ಸ್ಥಾಪಿಸಿದರು. ರಾಜ್ಯದಲ್ಲಿ ಒಂದು ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂಬ ಆಶಯದ ಫಲವಾಗಿ ಮೈಸೂರು ವಿಶ್ವವಿದ್ಯಾಲಯ ಆರಂಭ ಮಾಡಿದರು ಎಂದರು.
ಉಪನ್ಯಾಸಕ ಮಂಜುನಾಥ್ ಮಾತನಾಡಿ, ಡಿ.ಎ ನಾಲ್ವಡಿ ಕೃಷ್ಣರಾಜ ಒಡೆಯರು ತಮ್ಮ ಆಡಳಿತದಲ್ಲಿ ಮೈಸೂರು ಸಂಸ್ಥಾನದ ಪ್ರಗತಿಗೆ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದರು.ಆ ಕಾಲದಲ್ಲಿ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದ ಶೂದ್ರರು ಸ್ವಾಭಿಮಾನಿ ಗಳಾಗಿ ಬದುಕು ರೂಪಿಸಿಕೊಳ್ಳಲು ಸಾಧ್ಯವಾಯಿತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 38 ವರ್ಷಗಳ ಕಾಲ ದಕ್ಷ ಆಡಳಿತ ನಡೆಸಿ, ರಾಜರ್ಷಿ ಬಿರುದು ಪಡೆದುಕೊಂಡರು. ತಮ್ಮ ಸಂಸ್ಥಾನದ ಏಳಿಗೆಗಾಗಿ, ತಮ್ಮ ಪ್ರಜೆಗಳ ಬದುಕಿಗಾಗಿ ತಮ್ಮ ಇಡೀ ಜೀವನವನ್ನು ಮುಡಾಗಿಟ್ಟಿದ್ದ ಏಕೈಕ ಮಹಾರಾಜರು ಎಂದು ಬಣ್ಣಿಸಿ ಅವರ ಆಡಳಿತದಲ್ಲಿ ಕನ್ನಡನಾಡಿಗೆ ನೀಡಿದ ಕೊಡುಗೆಗಳು ಅಪಾರ ಮೈಸೂರು ಮೆಡಿಕಲ್ ಕಾಲೇಜು ಸ್ಥಾಪನೆ, ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಾಣ ಮಾಡುವ ಮೂಲಕ ಮೈಸೂರು ಭಾಗದ ರೈತರಿಗೆ ನೀರಾವರಿ ಕಲ್ಪಿಸಿಕೊಟ್ಟರು. ಕಡ್ಡಾಯ ಶಿಕ್ಷಣಕ್ಕೆ ಆದ್ಯತೆ ನೀಡಿದರು. ಇಂಥ ಮಹಾನ್ ರಾಜರಾದ ನಾಲ್ವಡಿ ಮಹಾರಾಜರು ಜಯಂತಿ ಯನ್ನು ಆಚರಣೆ ಮಾಡುವ ಮೂಲಕ ಅವರ ಸೇವೆಯನ್ನು ಸ್ಮರಿಸಿ ಕೊಳ್ಳೋಣ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ:
ಶಿಕ್ಷಣ ಮತ್ತು ರಂಗಕಲೆ ಕ್ಷೆತ್ರದಲ್ಲಿ ಸಿ.ಪಿ ಪುರುಷೋತ್ತಮ,ಸೇವಾಕ್ಷೇತ್ರದಲ್ಲಿ ಶಿಕ್ಷಕರ ಭವನ ಸುರೇಶ್, ಶಿಕ್ಷಣ ಕ್ಷೆತ್ರದಲ್ಲಿ ಅವನಿತ ಚೇತನ ಕೆ.ಎಸ್, ರಾಹುಲ್ ಕೆ.ಎಸ್ ಸಾಧನೆಗೈದ ಸಾಧಕರನ್ನ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಪಾರ್ಲೆ ರಾಜೇಶ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಧರ್ಮಪ್ಪ,ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮೇಶ್, ತಾ.ಜಾನಪದ ಪರಿಷತ್ತು ಅಧ್ಯಕ್ಷ ಕತ್ತರಘಟ್ಟ ವಾಸು,ಕೃಷ್ಣ ಸರ್ಕಾರಿ ಇಂಜಿನಿಯರ್ ಕಾಲೇಜು ಪ್ರಾಂಶುಪಾಲ ಕೆ.ಆರ್ ದಿನೇಶ್, ಆರ್ ಟಿ ಓ ಮಲ್ಲಿಕಾರ್ಜುನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗಂಜೀಗೆರೆ ಮಹೇಶ್, ಉಪನ್ಯಾಸಕ ಡಿಂಕಾ ಮಹೇಶ್, ಮಂಜೇಗೌಡ, ಕಾಲೇಜಿನ ವಿದ್ಯಾರ್ಥಿ ಗಳು ಸೇರಿದಂತೆ ಉಪಸ್ಥಿತರಿದ್ದರು.
(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)
Tags:
ಕೆ ಆರ್ ಪೇಟೆ ವರದಿ