ವಿಜಯ ಸಂಘರ್ಷ
ಭದ್ರಾವತಿ: ನಗರದ ಎಂಪಿಎಂ ಕಾರ್ಖಾನೆಯನ್ನು ರಾಜ್ಯ ಸರ್ಕಾರ ದಿಂದ ಸ್ವಾಧೀನ ಪಡಿಸಿಕೊಂಡು ಕೇಂದ್ರ ಸರ್ಕಾರದ ಆಡಳಿತಕ್ಕೆ ಒಳಪಟ್ಟಿರುವ ಹಿಂದುಸ್ಥಾನ್ ಪೇಪರ್ ಕಾರ್ಪೋರೇಷನ್ ಲಿಮಿಟೆಡ್ (HPCL) ಮಾದರಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಯಿತು.
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಕಾರ್ಯಗಳನ್ನು ರಾಜ್ಯಾದ್ಯಾಂತ ಕಾರ್ಯರೂಪಕ್ಕೆ ತಂದು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದು ಪ್ರಸ್ತುತ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರವಹಿಸಿ ಕೊಂಡಿರುವ ತಾವು ತಮ್ಮ ಅಧಿಕಾರಾ ವಧಿಯಲ್ಲಿ ಎಂಪಿಎಂ ಕಾರ್ಖಾನೆ ಅಭಿವೃದ್ಧಿಪಡಿಸುವಂತೆ ಆಗ್ರಹಿಸಲಾಯಿತು.
ಹಿಂದೆ ಕಾರ್ಖಾನೆಯಲ್ಲಿ ನ್ಯೂಸ್ ಪ್ರಿಂಟ್ ಪೇಪರ್, ನೀರು ಶುದ್ದೀಕರಣ ಕಾರ್ಯ ದೇಶದಲ್ಲಿಯೇ ದ್ವಿತೀಯ ಸ್ಥಾನದಲ್ಲಿದೆ. ಹಿಂದಿನ ಸರ್ಕಾರದಲ್ಲಿ ಕಾರ್ಖಾನೆಯನ್ನು ಪುನಶ್ಚತನ ಗೊಳಿಸದೇ ಸಂಪೂರ್ಣ ಮುಚ್ಚಿರುವು ದರಿಂದ ಕಾರ್ಮಿಕರು ಬೀದಿ ಪಾಲಾಗಿ ದ್ದಾರೆ. ಕ್ಷೇತ್ರದಲ್ಲಿ ನಿರುದ್ಯೋಗ ತಾಂಡಾವವಾಡುತ್ತಿದೆ.
ಕಾರ್ಖಾನೆಯು ಸಾವಿರಾರು ಎಕರೆಗಳ ವಿಶಾಲ ಜಾಗವೊಂದಿದ್ದು, ಭದ್ರಾ ನದಿಯ ದಡದಲ್ಲಿರುವುದರಿಂದ ಹಾಗೂ ವಿದ್ಯುಚ್ಛಕ್ತಿ ಉತ್ಪಾದನೆ, ಮಾಡಲು ಅವಕಾಶವಿರುವ ಉದ್ದೇಶದಿಂದ ಕ್ಷೇತ್ರದ ಸರ್ವ ತೋಮುಖ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಕಾರ್ಖಾನೆ ಯನ್ನು ರಾಜ್ಯ ಸರ್ಕಾರದೊಂದಿಗೆ ಮುಕ್ತ ಚರ್ಚಿಸಿ ಕೂಡಲೇ ಕ್ರಮಕ್ಕೆ ಮುಂದಾಗುವಂತೆ ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಅಧ್ಯಕ್ಷ
ಆರ್.ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.