ಮಹಾಮಾರಿ ಡೆಂಗ್ಯೂಗೆ ರಿಪ್ಪನ್‌ಪೇಟೆ ಮಹಿಳೆ ಬಲಿ?

ವಿಜಯ ಸಂಘರ್ಷ 
ತೀರ್ಥಹಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ರಿಪ್ಪನ್‌ಪೇಟೆ ರಶ್ಮಿ ಆರ್ ನಾಯಕ್ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿ ಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 

ರಾಘವೇಂದ್ರ ನಾಯಕ್ ಅವರ ಪತ್ನಿ ರಶ್ಮಿ ಆರ್.ನಾಯಕ್ (42) ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದು ಚಿಕಿತ್ಸೆ ಫಲಕಾರಿ ಯಾಗದೇ ಸಾವನ್ನಪ್ಪಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು