ಯುವಜನರಿಗೆ ಶಿಕ್ಷಣದ ಜೊತೆ ತಂತ್ರಜ್ಞಾನ ಆಧರಿತ ತರಬೇತಿ ಮುಖ್ಯ: ಬಿ.ವೈ.ರಾಘವೇಂದ್ರ

ವಿಜಯ ಸಂಘರ್ಷ 
ಶಿವಮೊಗ್ಗ: ಯುವಜನರಿಗೆ ಶಿಕ್ಷಣದ ಜೊತೆ ತಂತ್ರಜ್ಞಾನ ಆಧರಿತ ತರಬೇತಿ ನೀಡುವುದು ಹಾಗೂ ಕೌಶಲ್ಯ ವೃದ್ಧಿಸುವುದು ಅತ್ಯಂತ ಅವಶ್ಯಕ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಧುನಿಕ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸ್ಥಳೀಯ ಯುವಜನರಿಗೆ ಕೌಶಲ್ಯ ತರಬೇತಿ ನೀಡುವ ಸಂಘದ ಯೋಜನೆ ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.

ಜಿಲ್ಲೆಯು ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆಯುತ್ತಿದ್ದು, ರಸ್ತೆ, ರೈಲು, ವಿಮಾನ ಮಾರ್ಗ ಗಳಲ್ಲಿ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸ ಲಾಗುತ್ತಿದೆ. ದೇಶದ ಪ್ರಮುಖ ನಗರಗಳಿಗೆ ಸಂಚರಿಸಲು ಅನುಕೂಲವಾಗಲು ಎಲ್ಲ ವಾತಾವರಣವಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲ ಪ್ರಮುಖ ಸ್ಥಳಗಳಿಗೆ ವಿಮಾನ ಹಾರಾಟ ಆರಂಭಿಸುವ ಗುರಿ ಹೊಂದಲಾಗಿದೆ. ಇದರಿಂದ ವ್ಯಾಪಾರ ವಹಿವಾಟು ವೃದ್ಧಿಗೆ ಸಹಕಾರಿ ಯಾಗಲಿದೆ ಎಂದರು.

ತಂತ್ರಜ್ಞಾನ ಬಳಸಿಕೊಂಡು ಯುವ ಜನರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಉದ್ಯೋಗಕ್ಷೇತ್ರಕ್ಕೆ ತಯಾರು ಮಾಡಬೇಕಿದೆ. ಕೈಗಾರಿಕಾ ಕ್ಷೇತ್ರದ ಆಕಾಂಕ್ಷೆಗಳಿಗೆ ಪೂರಕವಾಗಿ ಕೌಶಲ್ಯ ಯುತ ಯುವ ಸಂಪನ್ಮೂಲವನ್ನು ಸಿದ್ಧಗೊಳಿಸಬೇಕಿದೆ. ಜಿಲ್ಲೆಯಲ್ಲಿ ಸ್ಕಿಲ್ ಅಕಾಡೆಮಿ ಮೂಲಕ ವಿಶೇಷ ಪ್ರಯತ್ನ ನಡೆಸುತ್ತಿರುವುದು ಉತ್ತಮ ಸಂಗತಿ ಎಂದು ಹೇಳಿದರು.

ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದ್ದು, ರಸ್ತೆ, ರೈಲು, ವಿಮಾನ ಸಂಪರ್ಕ ವ್ಯವಸ್ಥೆ ಸದೃಢವಾಗುತ್ತಿದೆ. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಯತ್ನದಿಂದ ಜಿಲ್ಲೆಯಲ್ಲಿ ಅಗತ್ಯ ಸೌಕರ್ಯ ಗಳು ದೊರಕಿವೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣವಿದ್ದರೂ ಕೈಗಾರಿಕೆಗಳ ಸ್ಥಾಪನೆ ಆಗುತ್ತಿಲ್ಲ. ಇದಕ್ಕೆ ಕೌಶಲ್ಯ ಸಂಪನ್ಮೂಲ ಕೊರತೆಯು ಒಂದು ಕಾರಣ. ಆದ್ದರಿಂದ ಸಂಘದ ವತಿಯಿಂದ ಸ್ಕಿಲ್ ಅಕಾಡೆಮಿ ಸ್ಥಾಪಿಸಿದ್ದು, ಉದ್ಯೋಗ ಕ್ಷೇತ್ರಕ್ಕೆ ಅವಶ್ಯ ವಿರುವಂತೆ ಯುವಜನರಿಗೆ ತರಬೇತಿ ನೀಡಲಾಗುವುದು. ಈಗಾಗಲೇ ಬಾಷ್ ಸೇರಿದಂತೆ ವಿವಿಧ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಯುವಜನರಿಗೆ ಉದ್ಯೋಗ ಒದಗಿಸುವಲ್ಲಿ ಸ್ಕಿಲ್ ಅಕಾಡೆಮಿ ಮಹತ್ತರ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಕಾರ್ಯದರ್ಶಿ ವಸಂತ ಹೋಬಳಿದಾರ್ ಸ್ಕಿಲ್ ಅಕಾಡೆಮಿ ರೂಪುರೇಷೆ ಕುರಿತು ವಿವರಣೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಮಧುಸೂದನ್ ಐತಾಳ್, ಬಿ.ಆರ್. ಸಂತೋಷ್, ಕೆ.ಎಸ್. ಸುಕುಮಾರ್, ಪ್ರದೀಪ್ ವಿ.ಯಲಿ, ಇ.ಪರಮೇಶ್ವರ್, ಗಣೇಶ್ ಎಂ.ಅಂಗಡಿ, ಬಿ.ಮಂಜೇಗೌಡ, ಮರಿಸ್ವಾಮಿ, ಮಾಜಿ ಅಧ್ಯಕ್ಷ ಕೆ.ವಿ.ವಸಂತಕುಮಾರ್, ಡಿ.ಎಂ.ಶಂಕರಪ್ಪ ಮತ್ತಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು