ವಿಜಯ ಸಂಘರ್ಷ
ಶಿವಮೊಗ್ಗ : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಹೆಚ್ಚು ಸಹಕಾರಿಯಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಅಭಿಪ್ರಾಯಪಟ್ಟರು.
ನಗರದ ವಿನೋಬನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟರಾಕ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಟರಾಕ್ಟ್ ಕ್ಲಬ್ ಮೂಲಕ ಒಂದು ಕಾರ್ಯಕ್ರಮದ ಆಯೋಜನೆಯ ಬಗ್ಗೆ ಎಲ್ಲಾ ಮಾಹಿತಿಗಳನ್ನು ಕಲಿಯಬಹುದು ಹಾಗೂ ಇದರ ಜೊತೆಯಲ್ಲಿ ಶಾಲೆಯ ವತಿಯಿಂದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿ ವನ ಮಹೋತ್ಸವ, ಆರೋಗ್ಯ ಜಾಗೃತಿ ಕಾರ್ಯಕ್ರಮ, ಶಿಕ್ಷಕರ ದಿನಾಚರಣೆ ವೈದ್ಯಕೀಯ ದಿನಾಚರಣೆ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿ ಗಳೇ ನಡೆಸಿಕೊಡುವಂತಹ ಕಾರ್ಯಕ್ರಮ ಗಳನ್ನು ಯಶಸ್ವಿಯಾಗಿ ಮಾಡಲು ಕ್ಲಬ್ ಸಹಾಯವಾಗುತ್ತದೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಮಾತನಾಡಿ, ರೋಟರಿ ಸಂಸ್ಥೆಯು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದು ವಿದ್ಯಾರ್ಥಿಗಳ ಜೀವನದಲ್ಲಿ ಸ್ವಂತವಾಗಿ ಒಂದು ಕಾರ್ಯಕ್ರಮವನ್ನು ಆಯೋಜಿಸಿ ಅವರ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ಇದಕ್ಕೆ ರೋಟರಿ ಸಂಸ್ಥೆಯ ಅಧ್ಯಕ್ಷರಿಗೂ ಹಾಗೂ ಎಲ್ಲಾ ಸದಸ್ಯರಿಗೂ ಧನ್ಯವಾದಗಳು ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ರಮೇಶ್.ಎಸ್.ಎಂ, ಶೋಭಾ ರಾಣಿ, ರೋಟರಿ ಕಾರ್ಯದರ್ಶಿ ಈಶ್ವರ್, ಇಂಟರಾಕ್ಟ್ ಚೇರ್ಮನ್ ವಿನೋದ್, ಖಜಾಂಚಿ ಬಸವರಾಜ್, ಅಸಿಸ್ಟೆಂಟ್ ಮಾಜಿ ಗೌರ್ನರ್ ರವಿ ಕೋಟೋಜಿ, ಗುರುರಾಜ್, ಚಂದ್ರು , ನಟರಾಜ್, ಜಗದೀಶ್, ಜೈಶೀಲ್ ಶೆಟ್ಟಿ ,ದೀಪಾ ಜೈಶೀಲ್ ಶೆಟ್ಟಿ, ಆನ್ಸ್ ಕ್ಲಬ್ಬ್ ನ ಅಧ್ಯಕ್ಷರಾದ ಗೀತಾ ಜಗದೀಶ್, ಕಾರ್ಯದರ್ಶಿ ಶುಭ ಚಿದಾನಂದ್ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿ ವಿನಯ್ ನಾಯಕ್ ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರಾಗಿ ಮತ್ತು ವಿದ್ಯಾರ್ಥಿನಿ ರಮ್ಯಾ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.
Tags:
ಶಿವಮೊಗ್ಗ ರೋಟರಿ ಸುದ್ದಿ