ವಿಜಯ ಸಂಘರ್ಷ
ಭದ್ರಾವತಿ: ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಯಿತು. ವಿದ್ಯಾ ಸಂಸ್ಥೆಯ ಕಾರ್ಯಧ್ಯಕ್ಷ ಬಿ.ಎಲ್.ರಂಗಸ್ವಾಮಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ವೈದ್ಯ ವೃತ್ತಿ ಅತ್ಯಂತ ಪೂಜನೀಯ ಹಾಗೂ ಸಮಾಜಕ್ಕೆ ವೈದ್ಯರ ಸೇವೆ ಶ್ಲಾಘನೀಯ ಎಂದು ವೈದ್ಯರ ಸೇವೆಯನ್ನು ಸ್ಮರಿಸಿದರು.
ಪ್ರಾಂಶುಪಾಲ ಡಾ.ರಾಕೇಶ್.ಎಸ್. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ: ಶಿವಪ್ರಕಾಶ್, ಮಣಿಪಾಲ ಆಸ್ಪತ್ರೆಯ ವೈದ್ಯ ಡಾ: ವೀರೇಶ್. ಎಂ.ಅಣಿಗೇರೆ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ವೈದ್ಯರು ವಿದ್ಯಾಸಂಸ್ಥೆಯ ಬಗ್ಗೆ ಅತ್ಯಂತ ಹೆಮ್ಮೆಯ ನುಡಿಗಳನ್ನಾಡಿದರು. ಸನ್ಮಾನಿತರು ಹಾಗೂ ವಿದ್ಯಾ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾದ ಡಾ || ವೀರೇಶ್. ಎಂ.ಅಣಿಗೇರೆಯವರು ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿಯೇ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಡೆದ ಬಗ್ಗೆ, ವಿದ್ಯಾಸಂಸ್ಥೆ ಯಲ್ಲಿ ತಮ್ಮ ಬಾಲ್ಯದ ಸವಿ ನೆನಪುಗಳ ಬಗ್ಗೆ ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಅನುಪಮಾ ಚೆನ್ನೇಶ್ , ವಿದ್ಯಾ ಸಂಸ್ಥೆಯ ನಿರ್ದೇಶಕ ಜನಾರ್ಧನ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ , ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬಿ.ಇಡಿ ವಿಭಾಗದ ಉಪನ್ಯಾಸಕರು, ಶಿಕ್ಷಕ ವೃಂದದವರು, ಬಿ. ಇಡಿ ಪ್ರಶಿ ಕ್ಷಣಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಕವಿತಾ ಪ್ರಾರ್ಥಿಸಿದರು, ರವಿ ಸ್ವಾಗತಿಸಿದರು , ಶಾಹಿನಾ ಬಾನು ವಂದಿಸಿದರು, ರೇಣುಕಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು.