ವಿಜಯ ಸಂಘರ್ಷ
ಭದ್ರಾವತಿ: ನಗರದ ವಿಐಎಸ್ಎಲ್ ಕಾರ್ಖಾನೆಯ ನಗರಾಡಳಿತ ಇಲಾಖೆ ಯಲ್ಲಿ ಗುತ್ತಿಗೆ ಪೌರ ಕಾರ್ಮಿಕರಿಂದ ಮ್ಯಾನುವೆಲ್ ಹೋಲ್ ನಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರಾಡಳಿತ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ ಅವರು, ಪೌರ ಕಾರ್ಮಿಕರನ್ನು ಯಾವುದೇ ಸುರಕ್ಷತೆ ನೀಡದೆ ಕರ್ತವ್ಯ ನಿರ್ವಹಿಸಲು ಸೂಚಿಸಿರುವುದು ಖಂಡನೀಯ. ಸರ್ಕಾರ ಆದೇಶವನ್ನು ಧಿಕ್ಕರಿಸಿ ಕರ್ತವ್ಯ ನಿರ್ವಹಿಸಲು ಆದೇಶ ನೀಡಿರುವುದು ಸಂವಿಧಾನಕ್ಕೆ ತೋರಿದ ಅಗೌರವ ಎಂದು ಕಿಡಿಕಾರಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಗರಸಭಾ ಪರಿಸರ ಇಂಜಿನಿಯರ್ ಪ್ರಭಾಕರ್ ಮಾತನಾಡಿ ಮ್ಯಾನುವೆಲ್ ಸ್ಕ್ಯಾವೆಂಜರ್ ಕರ್ತವ್ಯ ನಿರ್ವಹಿಸಲು ಯಾವುದೇ ಆದೇಶವಿಲ್ಲದಿದ್ದರೂ ಕರ್ತವ್ಯ ನಿರ್ವಹಿಸಲು ಸೂಚಿಸಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಸಮಾಜ ಕಲ್ಯಾಣಾಧಿಕಾರಿ ಗೋಪಾಲಪ್ಪ ನಗರಾಡಳಿತ ಅಧಿಕಾರಿಗಳು ಪೌರ ಕಾರ್ಮಿಕ ರನ್ನು ಮ್ಯಾನುವೆಲ್ ಸ್ಕ್ಯಾವೆಂಜರ್ ಕರ್ತವ್ಯಕ್ಕೆ ನೇಮಿಸಿರುವುದು ಸಾಮಾಜಿಕ ಜಾಲತಾಣ ಗಳಲ್ಲಿ ವಿಡಿಯೋ ಹರೆದಾಡಿರುವ ಹಿನ್ನಲೆ ಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಅಧಿಕಾರಿಗಳ ಮೇಲೆ ಕ್ರಮಗೊಳ್ಳುವ ಭರವಸೆ ನೀಡಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ರಂಗನಾಥ್, ಕಾಣಿಕ್ ರಾಜ್, ಮಣಿ, ಪರಮಿ ಸೇರಿದಂತೆ ನಗರಸಭಾ ಪೌರಾಕಾರ್ಮಿಕರು, ವಿಐಎಸ್ ಎಲ್ ಗುತ್ತಿಗೆ ಪೌರ ಕಾರ್ಮಿಕರು ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Tags:
ಭದ್ರಾವತಿ ದಸಂಸ ಪ್ರತಿಭಟನೆ