ವಿಜಯ ಸಂಘರ್ಷ
ಭದ್ರಾವತಿ: ಶಾಸಕ ಬಿ.ಕೆ ಸಂಗಮೇಶ್ವರ್ ರವರನ್ನು ರಾಜ್ಯ ಸರ್ಕಾರ ಬೃಹತ್ ಕೈಗಾರಿಕೆ ಖಾತೆ ಸಚಿವರನ್ನಾಗಿ ನೇಮಿಸಲು ಒತ್ತಾಯಿಸಿ
ಸೋಮವಾರ ತಾಲೂಕು ಕಛೇರಿ ಮುಂಭಾಗದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡು ತಹಸೀಲ್ದಾರ್ ಕೆ.ಆರ್. ನಾಗರಾಜು ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಮಾತನಾಡಿ, ವಿಐಎಸ್ ಎಲ್ ಹಾಗು ಮೈಸೂರು ಕಾಗದ ಕಾರ್ಖಾನೆಗಳ ಸ್ಥಾಪನೆಯಿಂದಾಗಿ ಕ್ಷೇತ್ರ ವಿಶ್ವದ ಭೂಪಟದಲ್ಲಿ ಕೈಗಾರಿಕಾ ನಗರವಾಗಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಕಾಲಾನಂತರದಲ್ಲಿ ರಾಜಕಾರಣಿಗಳ ನಿರ್ಲಕ್ಷ್ಯತನದಿಂದಾಗಿ ಎರಡು ಕಾರ್ಖಾನೆಗಳು ಅವನತಿ ದಾರಿ ಹಿಡಿಯುವ ಮೂಲಕ ಆರ್ಥಿಕ ಸ್ಥಿತಿ ಕುಸಿದು ಜನರು ನೆಮ್ಮದಿ ಬದುಕಿಗಾಗಿ ಬೇರೆಡೆಗೆ ವಲಸೆ ಹೋಗುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರ ಪುನಃ ಹಿಂದಿನ ವೈಭವ ಮರು ಕಳುಹಿಸಬೇಕು. ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್ ಪ್ರಸ್ತುತ ಸರ್ಕಾರದ ಆಡಳಿತ ಪಕ್ಷದವರಾಗಿದ್ದು, ಕ್ಷೇತ್ರದ ಅಭಿವೃದ್ಧಿ ಹಿನ್ನಲೆಯಿಂದ ಜನರ ಪರವಾಗಿ 4 ಬಾರಿ ಶಾಸಕ ರಾಗಿರುವ ಬಿ.ಕೆ.ಸಂಗಮೇಶ್ವರ್ ಅವರಿಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಬೃಹತ್ ಕೈಗಾರಿಕಾ ಸಚಿವ ಸ್ಥಾನದ ಅಗತ್ಯವಿದೆ.
ವಿಧಾನಸಭಾ ಚುನಾವಣೆ ಸಂದರ್ಭ ದಲ್ಲಿ ಬಹಿರಂಗ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಸಚಿವ ಸ್ಥಾನ ನೀಡಿಲ್ಲ. ತಕ್ಷಣ ಸಚಿವ ಸ್ಥಾನನೀಡಬೇಕೆಂದು ಒತ್ತಾಯಿಸಿ ಹಾಗು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಗೆ 2 ಸಚಿವ ಸ್ಥಾನಗಳನ್ನು ನೀಡಲಾಗಿತ್ತು. ಅದರಂತೆ ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವ ರಾಗಿರುವ ಮಧುಬಂಗಾರಪ್ಪನವರನ್ನು ಮುಂದುವರೆಸಿ ಒಟ್ಟು ಜಿಲ್ಲೆಗೆ 2 ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.
ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಯವರು ಕ್ಷೇತ್ರದಲ್ಲಿ 3 ಬಾರಿ ಶಾಸಕರಾಗಿದ್ದು, ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುವ ಮೂಲಕ ಇಂದಿಗೂ ಜನ ಮಾನಸದಲ್ಲಿ ಉಳಿದುಕೊಂಡಿದ್ದಾರೆ. ಇವರ ಹೆಸರನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ನಾಮಕರಣ ಗೊಳಿಸ ಬೇಕೆಂದು ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗು ತ್ತಿದೆ. ಆದರೂ ಸಹ ಇದುವರೆಗೂ ಅವರ ಹೆಸರನ್ನು ಸರ್ಕಾರ ನಾಮಕರಣಗೊಳಿಸಿರುವುದಿಲ್ಲ.ತಕ್ಷಣ ಅಪ್ಪಾಜಿ ಹೆಸರನ್ನು ನಾಮಕರಣ ಗೊಳಿಸಲು ಮುಂದಾಗಬೇಕೆಂದು ಒತ್ತಾಯಿಸಲಾಯಿತು.
ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು, ಮಹಿಳಾ ಪ್ರಮುಖರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.
ಇದೆ ಸಂದರ್ಭದಲ್ಲಿ ತಾಲೂಕು ಬಗರ್ ಹುಕುಂ ಸಮಿತಿ ನೂತನ ಅಧ್ಯಕ್ಷ ಎಸ್. ಮಣಿಶೇಖರ್ ರವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಖಂಡಿತ ಕೊಟ್ಟೆ ಕೊಡಬೇಕು ಸಚಿವ ಸ್ಥಾನ ಈಗಲ್ಲದಿದ್ದರೆ ಮತ್ತಿನ್ಯಾವಾಗ
ಪ್ರತ್ಯುತ್ತರಅಳಿಸಿ