ವಿಜಯ ಸಂಘರ್ಷ
ಭದ್ರಾವತಿ: ನಗರದ ಸೈಲ್- ವಿಐಎಸ್‌ಎಲ್ ವತಿಯಿಂದ ರಜತ ಮಹೋತ್ಸವ ಕ್ರೀಡಾಂಗಣದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಸೈಲ್- ವಿಐಎಸ್ಎಲ್ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಧ್ವಜಾರೋಹಣ ನೆರವೇರಿಸಿ, ಕವಾಯತ್ ವಿಕ್ಷಿಸಿ, ಪಥಸಂಚಲನ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಲಯ ಉಪ ಅರಣ್ಯ ಸಂರಕ್ಷಣಾಧಿ ಕಾರಿ ಆಶಿಶ್ ರೆಡ್ಡಿ ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾ ಪ್ರಬಂಧಕ ಎಲ್.ಪ್ರವೀಣ್ ಕುಮಾರ್, ಕಾರ್ಮಿಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಾರ್ಖಾನೆ ಭದ್ರತಾ ಸಿಬ್ಬಂದಿಗಳು,
ಸರ್ ಎಂ ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಎನ್.ಸಿ.ಸಿ, ವಿವಿಧ ಪ್ರೌಢಶಾಲೆ ಗಳು. ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಂದ ಪಥಸಂಚಲನ ಕಾರ್ಯಕ್ರಮ ನೆರವೇರಿತು. ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಎಂಪಿಎಂ ಆಂಗ್ಲ ಶಾಲಾ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆದವು.
ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಶಿಶ್ ರೆಡ್ಡಿ, ಭದ್ರಾವತಿ ಓಪನ್ ರ್ಯಾಪಿಡ್ ಚೆಸ್ ಚಾಂಪಿಯನ್ ಷಿಪ್-2024-25' ರ ಸ್ಪರ್ಧೆ ಯಲ್ಲಿ ತೃತೀಯ ಬಹುಮಾನ ಪಡೆದ ಕಾರ್ಖಾನೆಯ ಉಪಪ್ರಬಂಧಕ ಎಂ.ಕೃಷ್ಣ ರವರ ಪುತ್ರ ಎಂ.ಜತಿನ್ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ಅಧಿಕಾರಿಗಳು, ವಿಐಎಸ್ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 150 ಸಸಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
'ಹರ್ ಘರ್ ತಿರಂಗ' ಅಭಿಯಾನದ ಅಂಗವಾಗಿ ವಿಐಎಸ್ಎಲ್ ಸಮುದಾಯ ಮತ್ತು ಕುಟುಂಬ ಸದಸ್ಯರು ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಿ, www.harghartiranga.com ನಲ್ಲಿ ತ್ರಿವರ್ಣದೊಂದಿಗೆ ಸೆಲ್ಪಿ ಪೋಟೊ ಗಳನ್ನು ಅಪ್‌ಲೋಡ್ ಮಾಡಿ ಸರ್ಟಿಫಿಕೇಟ್‌ಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ.
ಸಹಾಯಕ ಮಹಾ ಪ್ರಬಂಧಕ (ಹಣಕಾಸು) ಇಳಯರಾಜ ನಿರೂಪಿಸಿದರು, ವಿಐಎಸ್ಎಲ್ ಸಾರ್ವಜನಿಕ ಸಂಪರ್ಕ, ಟ್ರಾಫಿಕ್, ನಗರಾಡಳಿತ ಮತ್ತು ಭದ್ರತಾ ಇಲಾಖೆಗಳು ಸಂಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಮೂಹದಲ್ಲಿ ದೇಶಭಕ್ತಿ ಮತ್ತು ದೇಶಪ್ರೇಮವನ್ನು ಮೂಡಿಸಿತು.