ವಿಜಯ ಸಂಘರ್ಷ
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ.
ಸಾಗರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ ಬಸ್ ಬಾಳೂರು ಸಮೀಪದ ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದಿದೆ.
ಬಸ್‌ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕ ರಿದ್ದರು. ಘಟನೆ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರಿಗೆ ಸಮಯ ಪ್ರಜ್ಞೆ ಮೆರೆದಿದ್ದಾರೆ. ಕೆಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.