ವಿಜಯ ಸಂಘರ್ಷ
ಭದ್ರಾವತಿ: ಗೌರಿ ಹಾಗೂ ಗಣೇಶ ಹಬ್ಬವನ್ನು ಪರಿಸರಕ್ಕೆ ಹಾನಿಯಾಗ ದಂತೆ ಆಚರಿಸಲು ನಗರ ವೃತ್ತ ನೀರಿಕ್ಷಕ ಶ್ರೀಶೈಲ ಕುಮಾರ್ ಕರೆ ನೀಡಿದರು.
ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ಗಣಪತಿ ಸಂಘದ ಪದಾಧಿಕಾರಿ ಗಳ ಸಭೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಸೌಹಾರ್ಧಯುತವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಕರೆಯಲಾದ ಪೂರ್ವ ಭಾವಿ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣೇಶ ವಿಗ್ರಹಗಳ ಪ್ರತಿಷ್ಠಾಪನೆಗೆ ಕಡ್ಡಾಯವಾಗಿ ಆಯಾ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗುವ ಏಕ ಗವಾಕ್ಷಿ ಯಲ್ಲಿ ಅನುಮತಿ ಪಡೆದು ಪ್ರತಿಷ್ಠಾಪನೆ ಮಾಡಬೇಕು ಶಾಂತಿ ಯುತವಾಗಿ ಆಚರಿಸಬೇಕು ಎಂದರು.
ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡಿದ ಸ್ಥಳಗಳಲ್ಲಿ ಬೆಳಕು ಹಾಗೂ ಸಿಸಿಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯೋಜಕರೇ ಸಂಪೂರ್ಣ ಹೊಣೆ ಹೊರಬೇಕು. ಅಹಿತಕರ ಘಟನೆಗಳು ನಡೆದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು.
ಧ್ವನಿವರ್ಧಕಗಳಿಗೆ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಹಬ್ಬಗಳ ಆಚರಣೆ ಸಮಯ ದಲ್ಲಿ ಸಾಮಾಜಿಕ ಜಾಲತಾಣ ಗಳಲ್ಲಿ ಸುಳ್ಳು ಸುದ್ದಿಗಳು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಎಲ್ಲರೂ ಕಾನೂನನ್ನು ಗೌರವಿಸಬೇಕು, ಇಲಾಖೆಯು ಸಹ ಎಲ್ಲರಿಗೂ ಸಹಕಾರ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ನ್ಯೂಟೌನ್ ಠಾಣೆ ಪಿಎಸ್ಐ ಟಿ.ರಮೇಶ್, ಭಾರತಿ, ಸಾರ್ವಜನಿಕ ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿ ಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿದ್ದರು.