ಗ್ರಾ ಪಂ ಅಧಿಕಾರಿ- ಸದಸ್ಯರ ಅಕ್ರಮಗಳ ವಿರೋಧಿಸಿ ಕರವೇ ಪ್ರತಿಭಟನೆ

ವಿಜಯ ಸಂಘರ್ಷ 
ಭದ್ರಾವತಿ: ತಾಲ್ಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಸಾರಥ್ಯದ) ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ರಾಘವೇಂದ್ರ ಹೆಬ್ಬಾರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. 

ಪಂಚಾಯಿತಿ ವ್ಯಾಪ್ತಿಯ ಸರಕಾರಿ ಹಾಗೂ ಖಾಸಗಿ ಕಚೇರಿಗಳು ಅಂಗಡಿ ಮುಗ್ಗಟ್ಟುಗಳಲ್ಲಿ ಅಳವಡಿಸಿರುವ ನಾಮಫಲಕಗಳನ್ನು ಸರಕಾರದ ಆದೇಶದಂತೆ ಶೇಕಡ 60 ರಷ್ಟು ಕನ್ನಡ, ಶೇಕಡ 40 ರಷ್ಟು ಆಂಗ್ಲ ಭಾಷೆ ಮಾತ್ರ ಇರುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡಬೇಕು, ಇಲ್ಲವಾದಲ್ಲಿ ವೇದಿಕೆ ವತಿಯಿಂದ ಆಂಗ್ಲ ನಾಮಪಾಲಕಗಳನ್ನು ತೆರವು ಗೊಳಿಸಲು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.

ನೀರುಗಂಟಿ ಹಾಗೂ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಅವರಿಗೆ ಸರಿಯಾದ ವೇತನ ನೀಡದೆ ತಾರತಮ್ಯ ಮಾಡಿರುವುದು, ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಮಾರಾಟ ಮಾಡಿರುವುದು, ಖಾಸಗಿ ಲೇಔಟ್ ಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬೇಕಾದ ನಿವೇಶನ ಪಡೆಯದೇ ಇರುವುದು,ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಸ್ಥಳೀಯ ರಿಗೆ ಉದ್ಯೋಗ ನೀಡದಿರುವುದು ಸೇರಿದಂತೆ ಹತ್ತು ಹಲವಾರು ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಸರ್ಕಾರಿ ದಾಖಲೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು. 

ಇನ್ನೊಂದು ತಿಂಗಳೊಳಗೆ ಆಗಿರುವ ಅಕ್ರಮಗಳನ್ನು ಸರಿಪಡಿಸದೆ ಇದ್ದಲ್ಲಿ ತಾಲ್ಲೂಕು ಪಂಚಾಯಿತಿ ಕಛೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಇದೆ ಸಂದರ್ಭದಲ್ಲಿ ಪ್ರತಿಭಟನಾ 
ಕಾರರು ಎಚ್ಚರಿಕೆ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಪ್ರಮುಖರಾದ ನರಸಿಂಹರಾಜು, ರಾಕೇಶ್, ರವಿಕುಮಾರ್, ಮೋಹನ್ ಕುಮಾರ್, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು