ವಿಜಯ ಸಂಘರ್ಷ
ಭದ್ರಾವತಿ: ಸಿಎಂ ಸಿದ್ದರಾಮಯ್ಯ ನವರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿ ಕೈಗೊಂಬೆಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಪತ್ರಿಕಾ ಹೇಳಿಕೆಯಲ್ಲಿ ಆಪಾದಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯದ ಬಿಜೆಪಿಯವರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಈ ಕ್ರಮಕ್ಕೆ ಮುಂದಾಗಿದ್ದಾರೆ ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ.
40 ವರ್ಷದ ರಾಜಕೀಯ ಜೀವನದಲ್ಲಿ ಮುಖ್ಯಮಂತ್ರಿಗಳ ಮೇಲೆ ಒಂದೇ ಒಂದು ಕಪ್ಪು ಚುಕ್ಕೆಯು ಕೂಡ ಇಲ್ಲದನ್ನು ಸಹಿಸದ ಬಿಜೆಪಿಯವರು ಈ ನೀಚ ಕೃತ್ಯಕ್ಕೆ ಕೈ ಹಾಕಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಯವರ ಮೇಲೆ ಪ್ಯ್ರಾಸಿಕ್ಯೂಷನ್ ಗೆ ಅನುಮತಿ ಕೋರಿರುವ ಕಡತ ರಾಜ್ಯಪಾಲರ ಕಚೇರಿಯಲ್ಲಿ ಗೆದ್ದಲು ತಿನ್ನುತ್ತಿದೆ. ಅದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ರಾಜ್ಯಪಾಲರ ಈ ರೀತಿಯ ನಡೆಯ ವಿರುದ್ಧ ಕೆಪಿಸಿಸಿ ಹಾಗೂ ಜಿಲ್ಲಾಧ್ಯಕ್ಷರು ನೀಡುವ ಸೂಚನೆಯನ್ವಯ ಮುಂದಿನ ಹೋರಾಟ ವನ್ನು ಜಿಲ್ಲಾದ್ಯಾಂತ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.