ಕ್ರೀಡೆಯಲ್ಲಿನ ಸೋಲು- ಗೆಲುವನ್ನು ಪರಿಗಣಿಸದೆ ಸ್ಪರ್ಧಾತ್ಮಕವಾಗಿ ಪಾಲ್ಗೊಳ್ಳಿ

ವಿಜಯ ಸಂಘರ್ಷ 
ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಬಾಲ್ಯ ದಿಂದಲೇ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯ ವಾಗಿ ತೊಡಗಿಕೊಳ್ಳಲು ಕ್ರೀಡಾಕೂಟ ಸಹಕಾರಿ ಯಾಗಲಿವೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ ಶಿವರಾಮೇಗೌಡ ಹೇಳಿದರು.

ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ರುವ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಎಸ್.ಎಸ್. ಕೆ ಮಂಡ್ಯ.ಬಿ.ಈ. ಓ ಕೆ.ಆರ್.ಪೇಟೆ ಕಛೇರಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. 

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹಂತ-ಹಂತವಾಗಿ ಯಶ್ವಸಿಗೊಳ್ಳಬೇಕೆಂಬ ದೃಷ್ಟಿಯಿಂದ ಶಿಕ್ಷಣ ಇಲಾಖೆ ಇಂತಹ ಕಾರ್ಯಕ್ರಮ ಅಯೋಜನೆ ಮಾಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು. ಕ್ರೀಡೆಯಲ್ಲಿನ ಸೋಲು, ಗೆಲುವನ್ನು ಗಂಭೀರವಾಗಿ ಪರಿಗಣಿಸದೆ ಸ್ಪರ್ಧಾತ್ಮಕವಾಗಿ ಪಾಲ್ಗೊಳ್ಳಬೇಕು.

ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳ ಬೇಕು. ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಶಿಕ್ಷಣ ಇಲಾಖೆ ಹೆಚ್ಚಿನ ಕ್ರಮ ವಹಿಸಿದೆ. ಶಾಲಾಗಳಲ್ಲಿ ಶಿಕ್ಷಕರು ಪ್ರೋತ್ಸಾಹ ನೀಡುತ್ತಿದ್ದು, ಪೋಷಕರು ಸಹ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಪದ್ಮೇಶ್ ಮಾತನಾಡಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ ಯಾಗಿವೆ.ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ವಿದ್ಯಾರ್ಥಿಗಳು ಒಂದಲ್ಲ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳು ವುದಕ್ಕೆ ಆಸಕ್ತಿ ಇರುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆಲ್ಲುವ ಗುರಿ ಹೊಂದಬೇಕು. ನಿರ್ಣಯಕರು ನೀಡಿದ ತೀರ್ಪಿಗೆ ಬದ್ಧರಿರ ಬೇಕು.ಅನಾವಶ್ಯಕ ಗದ್ದಲಗಳಿಗೆ ಆಸ್ಪದ ಮಾಡಿಕೊಡ ಬಾರದು. ಸೋಲು-ಗೆಲುವ ಸಾಮಾನ್ಯ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ.ಸೋತವರು ಹತಾಶರಾಗ ಬಾರದು ಮುಂದಿನಸಲ ಗೆಲ್ಲುವತ್ತ ಗುರಿ ಇಟ್ಟುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸೈಯದ್ ಉಮರ್, ಉಪಾಧ್ಯಕ್ಷ ಲೋಲಾಕ್ಷಿ, ಮುಖ್ಯ ಶಿಕ್ಷಕ ರವಿ ಕುಮಾರ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪಿ.ಜೆ. ಕುಮಾರ್, ಹಿರಿಯ ಉಪಾಧ್ಯಕ್ಷ ಆನಂದ್ ಕುಮಾರ್, ತಾಲ್ಲೂಕು ಎಸ್ಸಿ ಎಸ್ಟಿ ನೌಕರರ ಸಂಘದ ಅಧ್ಯಕ್ಷ ಹಳೆಯೂರು ಯೋಗೇಶ್,ಗ್ರಾ. ಪಂ ಸದಸ್ಯ ಹಾಗೂ ಗುತ್ತಿಗೆದಾರ ಶೀಳನೆರೆ ಸಿದ್ದೇಶ್,ಶಾಲಾ ಸಹ ಶಿಕ್ಷಕರು ದೈಹಿಕ ಶಿಕ್ಷಕರು ಸೇರಿದಂತೆ ಕ್ರೀಡಾಪಟುಗಳು ಇದ್ದರು.

(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು