ಕಿಕ್ಕೇರಿ ಕೃಷ್ಣಮೂರ್ತಿಗೆ ಅಭಿನಂದನೆ

ವಿಜಯ ಸಂಘರ್ಷ 
ಶಿವಮೊಗ್ಗ: ಕನ್ನಡ ಸಂಸ್ಕೃತಿ ಇಲಾಖೆ ಯಡಿ ಕಾರ್ಯ ನಿರ್ವಹಿಸುವ ಮಂಡ್ಯದ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ಸುಗಮ ಸಂಗೀತ ಗಾಯಕ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶಿಸಿರುವುದಕ್ಕೆ ಕರ್ನಾಟಕ ಸುಗಮ ಸಂಗೀತ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕ ಅಭಿನಂದನೆ ಸಲ್ಲಿಸಿದೆ.

ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರಿಗೆ ಶಿವಮೊಗ್ಗ ಜಿಲ್ಲಾ ಘಟಕ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಅಧ್ಯಕ್ಷೆ ಶಾಂತಾ ಶೆಟ್ಟಿ, ಕಾರ್ಯದರ್ಶಿ ಮಂಜುನಾಥ್, ಜಿ.ವಿಜಯಕುಮಾರ್, ಭದ್ರಾವತಿ ವಾಸು ಹಾಗೂ ಪರಿಷತ್ ಸದಸ್ಯ ಪದಾಧಿಕಾರಿಗಳು, ಕಲಾವಿದರು ಅಭಿನಂದಿಸಿ ಶುಭಕೋರಿದ್ದಾರೆ.

ಮಂಡ್ಯದ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಮಂಡ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸುಗಮ ಸಂಗೀತ ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರು ಅಮೆರಿಕಾದಲ್ಲಿ ಆಯೋಜಿಸಿರುವ ಅಕ್ಕ ಸಮ್ಮೇಳನಲ್ಲಿ ಭಾಗವಹಿಸಲಿದ್ದಾರೆ. ಕೃಷ್ಣಮೂರ್ತಿ ಅವರು ಈವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು