ವಿಜಯ ಸಂಘರ್ಷ
ಶಿವಮೊಗ್ಗ: ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿ ಯರಿಗೆ ಹಾಗೂ ಪೋಷಕರಿಗೆ ಲೈಂಗಿಕ ದೌರ್ಜನ್ಯದಿಂದ ಸಂರಕ್ಷಣೆ ಪಡೆಯುವ ಕಾಯಿದೆ 2012(ಪೋಕ್ಸೋ) ಹಾಗೂ ಬಾಲ್ಯ ವಿವಾಹ ನಿಷೇದ ಕಾಯಿದೆ 2006 ಇವುಗಳ ಕುರಿತು ಅರಿವು ಮೂಡಿಸುವುದು ಶಾಲಾ ಆಡಳಿತ ಮಂಡಳಿಗಳ ಹಾಗೂ ಶಿಕ್ಷಕರ ಜವಾಬ್ದಾರಿಯೆಂದು ನಗರದ ವಕೀಲ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಬಸವರಾಜ್ ಅಭಿಪ್ರಾಯ ಪಟ್ಟರು.
ಅವರು ಶನಿವಾರ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ಮಕ್ಕಳಿಗೆ ಪೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕಾಯಿದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹದಿಹರೆಯದ ಮಕ್ಕಳಿಗೆ ಮತ್ತು ಪೋಷಕರಿಗೆ ಬಂಧುಗಳು ಅಥವಾ ಶಿಕ್ಷಕರು ತಮ್ಮ ಮೈಯನ್ನು ಮುಟ್ಟುವಾಗ ಬ್ಯಾಡ್ ಟಚ್ ಮತ್ತು ಗುಡ್ ಟಚ್ ಮೂಲಕ ಮುಟ್ಟುತ್ತಾ ರೆಯೇ ಎಂಬುದರ ವ್ಯತ್ಯಾಸವನ್ನು ತಿಳಿದುಕೊಂಡಿರುವುದು ಮುಖ್ಯ. ತಂದೆ- ತಾಯಿ ಅಥವಾ ಸ್ವಂತ ಸಹೋದರ ಸಹೋದರಿಯರ ಹೊರತಾಗಿ ಇತರರ ಜೊತೆಗೆ ವ್ಯವಹರಿಸುವಾಗ ಈ ಪರಿಜ್ಞಾನ ಹೊಂದಿರ ಬೇಕೆoದು ಸೂಕ್ತ ವಿಡಿಯೋ ಕ್ಲಿಪ್ಪಿಂಗ್‌ಗಳನ್ನು ಪ್ರದರ್ಶಿಸುವುದರ ಮೂಲಕ ಮಕ್ಕಳಿಗೆ ಹಾಗೂ ಪೋಷಕರಿಗೆ ಈ ಅಂಶಗಳನ್ನು ಮನದಟ್ಟು ಮಾಡಿದರು.
ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಕಡಿಮೆಯಾಗುತ್ತಿದ್ದರೂ, ಕೆಲವು ಪ್ರದೇಶಗಳ ಹಾಗೂ ಕೆಲವು ತೀರಾ ಹಿಂದುಳಿದ ವರ್ಗಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಜೀವಂತ ಇರುವುದು ಅತ್ಯಂತ ದುರದೃಷ್ಟಕರ ಸಂಗತಿ ಎನ್ನುತ್ತ ಹೆಣ್ಣು ಮಕ್ಕಳು 18 ವರ್ಷಕ್ಕಿಂತ ಮುಂಚೆ & ಗಂಡು ಮಕ್ಕಳು 21ವರ್ಷಕ್ಕಿಂತ ಮುಂಚೆ ವಿವಾಹ ಮಾಡುವುದು ಅವರ ಆರೋಗ್ಯ ಹಾಗೂ ಕಾನೂನು ದೃಷ್ಟಿಯಿಂದ ಸೂಕ್ತವಲ್ಲ ಎಂದು ಕಿವಿ ಮಾತು ಹೇಳಿದರು.
ರೋಟರಿ ಪೂರ್ವದ ಅಧ್ಯಕ್ಷ ಅರುಣ್ ದೀಕ್ಷಿತ್ ಸಮಾರಂಭ ಉದ್ಘಾಟಿಸಿದರು. ಟ್ರಸ್ಟ್ ಉಪಾಧ್ಯಕ್ಷ ಡಾ:ಪರಮೇಶ್ವರ್ ಡಿ. ಶಿಗ್ಗಾಂವ್ ಪ್ರಾಸ್ತಾವಿಕವಾಗಿ ಮಾತನಾಡಿ,ಮಕ್ಕಳ ಲೈಂಗಿಕ ಶೋಷಣೆಯನ್ನು ತಡೆಗಟ್ಟಲು ಅವರಿಗೆ ಈ ಕಾಯಿದೆಯ ಅರಿವಿನ ಮಹತ್ವ ಎಷ್ಟರ ಮಟ್ಟಿಗೆ ಅವಶ್ಯಕ ಎಂಬುದನ್ನು ತಿಳಿಸುತ್ತಾ, ಶಾಲೆಯಲ್ಲಿ ಈ ಸಂಬoಧದ ದೂರುಗಳನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಲಾಗುವುದು ಎಂದರು.
ರೋಟರಿ ಎಜುಕೇಷನಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ ಎಂ., ಮಾತನಾಡಿ, ತಾವು ಶಿಕ್ಷಣ ಇಲಾಖೆಯ ವಿವಿಧ ಹಂತದಲ್ಲಿ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಗಮನಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಿವರಿಸುತ್ತಾ, ಮಕ್ಕಳು ಈ ಬಗ್ಗೆ ಎಚ್ಚರದಿಂದ ಇರುವುದು ಅವರ ಉಜ್ವಲ ಭವಿಷ್ಯದ ದೃಷ್ಟಿಯಿಂದ ಅತೀ ಅವಶ್ಯಕ, ಹಾಗೆಯೇ ಶಿಕ್ಷಕರು ಈ ಸಂಬoಧ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದರು.
ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಖಜಾಂಚಿ ಜಿ. ವಿಜಯ್ ಕುಮಾರ್ ಹಾಗೂ ಪ್ರಾಂಶುಪಾಲ ಸೂರ್ಯನಾರಾಯಣನ್ ಆರ್. ಉಪಸ್ಥಿತರಿದ್ದರು.
Tags:
ಶಿವಮೊಗ್ಗ ಸುದ್ದಿ