ವಿಧಾನಸಭೆ ಫಲಿತಾಂಶದಿಂದ ಬಿಜೆಪಿ-ಜೆಡಿಎಸ್ ಹತಾಶರಾಗಿದ್ದಾರೆ: ಕೋಡಿಮಾರನಹಳ್ಳಿ ದೇವರಾಜು

ವಿಜಯ ಸಂಘರ್ಷ 
ಕೆ.ಆರ್.ಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ 40 ವರ್ಷಗಳ ರಾಜಕೀಯ ಜೀವನ, ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಆದರೆ ಇದೀಗ ಮುಡಾ ವಿಚಾರವಾಗಿ ಅವರ ವಿರುದ್ಧ ಕುಟಿಲ ಸಾಹಸವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ ಎಂದು ಜಿ.ಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ ವಿಧಾನಸಭೆ ಫಲಿತಾಂಶದಿಂದ ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ಕಾಂಗ್ರೆಸ್ 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆ ಗಳನ್ನು ಕೊಡ್ತಾರೆ. ಒಬ್ಬ ಹಿಂದುಳಿದ ವರ್ಗದ ನಾಯಕ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಮುಡಾ ಹಂಚಿಕೆ ಸಿದ್ದರಾಮಯ್ಯ ಅವರ ಕಾಲದಲ್ಲಿ ನಡೆದಿಲ್ಲ ಬಿಜೆಪಿ ಅಧಿಕಾರ ವಧಿಯಲ್ಲಿ ನಡೆದ ಪ್ರಕರಣ. ಎಲ್ಲರಂತೆಯೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ ನಿವೇಶನ ಹಂಚಿಕೆಯಾಗಿದ್ದು, ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಆದರೂ ಸಹ 40 ವರ್ಷಗಳ ರಾಜಕೀಯ ರಣರಂಗದಲ್ಲಿ ಕಳಂಕ ರಹಿತ ರಾಜಕಾರಣಿ ಸಿದ್ದರಾಮಯ್ಯ ವಿರುದ್ದ ವಿಪಕ್ಷಗಳು ಹಾಗೂ ಕೇಂದ್ರ ಸರ್ಕಾರ ಇಲ್ಲಸಲ್ಲದ ಷಡ್ಯಂತ್ರ ನಡೆಸುತ್ತಿವೆ. ಸಿದ್ದು ಅವರ ಶಕ್ತಿಯನ್ನ ಕುಗ್ಗಿಸಲು ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಗಾಗಲೀ ಸಾಧ್ಯವಿಲ್ಲ.

ವ್ಯಕ್ತಿಯೊಬ್ಬ ನೀಡಿದ ದೂರು ಆಧರಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೀಡಿರುವ ಶೋಕಾಸ್ ನೋಟಿಸನ್ನು ರಾಜ್ಯಪಾಲರು ಕೂಡಲೇ ಹಿಂಪಡೆಯ ಬೇಕು. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಅನಗತ್ಯ ಪಾದಯಾತ್ರೆಯ ಮೂಲಕ ಮುಗ್ದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಅದರಿಂದ ಜನರ ಜಾಗೃತಿ ಮೂಡಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಆಗಸ್ಟ್ 9 ಶುಕ್ರವಾರ ಮೈಸೂರಿನಲ್ಲಿ ಬೃಹತ್ ಜನಾಂದೋಲನ ಕಾರ್ಯಕ್ರಮ ಕೈಗೊಳ್ಳುವ ಮೂಲಕ ಜನರ ಜಾಗೃತಿ ಮೂಡಿಸುವ ಬೃಹತ್ ಕಾರ್ಯಕ್ರಮಕ್ಕೆ ನಮ್ಮ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬ ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಮೂಲಕ ಕಾರ್ಯಕ್ರಮ ಯಶಸ್ವಿಗೆ ಸಹಕಾರಿಯಾಗಬೇಕು ಎಂದರು. 

ಸರ್ವ ಜನಾಂಗದ ನಾಯಕರಾಗಿ ಜರಸ್ನೇಹಿ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯರ ಮೇಲೆ ಆರೋಪ ಗಳನ್ನ ವಿರೋಧ ಪಕ್ಷಗಳು ಮುಂದುವ ರಿಸಿದರೆ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಉಗ್ರ ಹೋರಾಟ ನಡೆಸಲು ಅವರ ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿದ್ದರಿದ್ದೇವೆ ಎಂದು ಹೋರಾಟದ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪುರಸಭಾ ಸದಸ್ಯ ರವೀಂದ್ರ ಬಾಬು,ತಾ.ಪಂ ಮಾಜಿ ಸದಸ್ಯ ಸಣ್ಣನಿಂಗೇಗೌಡ,ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಪುರುಷೋತ್ತಮ್, ಕಾಂಗ್ರೆಸ್ ಮುಖಂಡರಾದ ಗುಡುಗನಹಳ್ಳಿ ರಾಯಪ್ಪ, ಕೆ.ಆರ್. ಪೇಟೆ ರಮೇಶ್, ಮಾರ್ಗೋನಹಳ್ಳಿ ಮಂಜುನಾಥ್, ಹಿರಿಕಳಲೆ ಗ್ರಾ.ಪಂ ಸದಸ್ಯ ರಾಮಕೃಷ್ಣೇಗೌಡ,ಯುವ ಮುಖಂಡ ಕಾಡುಮೆಣಸ ರುಕೇಶ್, ಕಾಳೇಗೌಡ ಸೇರಿದಂತೆ ಉಪಸ್ಥಿತರಿದ್ದರು.

✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ..

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು