ವಿಜಯ ಸಂಘರ್ಷ
ಭದ್ರಾವತಿ: ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಹಯೋಗದೊಂದಿಗೆ ರೇಬಿಸ್ ರೋಗದ ಅರಿವು ಕುರಿತು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವೈದ್ಯ ಡಾ. ಮಧು ಕುಮಾರ್ ರೇಬಿಸ್ ರೋಗದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಕೇಶ್ ಎಸ್ ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದಲ್ಲಿ ವಿದ್ಯಾ ಸಂಸ್ಥೆಯ ಕನ್ನಡ ಮತ್ತು ಆಂಗ್ಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶಕುಂತಲಾ ಹಾಗೂ ಹೇಮಾವತಿ, ಸಿಬ್ಬಂದಿಗಳು ಉಪಸ್ಥಿತ ರಿದ್ದರು. ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರೆ, ಅಂಬಿಕಾ ವಂದಿಸಿದರು.