ವಿಜಯ ಸಂಘರ್ಷ
ಭದ್ರಾವತಿ: ಹಳೇನಗರದ ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಿಂಭಾಗದಲ್ಲಿ ಎರಡು ವರ್ಷಗಳ ಹಿಂದೆ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಮೂಲ ಭೂತ ಸೌಲಭ್ಯ ವಂಚಿತಗೊಂಡಿದೆ. ಸಾರ್ವಜನಿಕರ ತೆರಿಗೆ ಹಣ ಪೊಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ನಗರಸಭೆ ವಿರುದ್ದ ಕಿಡಿಕಾರಿದ್ದಾರೆ.
ಸುಮಾರು 20 ಲಕ್ಷ ರೂ ನಗರಸಭೆ ಅನುದಾನದಲ್ಲಿ ಮಹಿಳೆಯರ ಮತ್ತು ಪುರುಷರ ಉಪಯೋಗಕ್ಕೆ ನಿರ್ಮಿಸಿರುವ ಹಸಿರು ಶೌಚಾಲಯ ದಲ್ಲಿ ನೀರು ಮತ್ತು ವಿದ್ಯುತ್ ಹಾಗೂ ಸರಿಯಾದ ನಿರ್ವಹಣೆ ಇಲ್ಲದೆ ಪಾಳು ಬಿದ್ದಂತಹ ಸ್ಥಿತಿಗೆ ತಲುಪಿದೆ ಎಂದು ಹರಿಹಾಯ್ದಿದ್ದಾರೆ.
ಪ್ರತಿನಿತ್ಯ ಸಹಸ್ರಾರು ಸಾರ್ವಜನಿಕರು ತಾಲೂಕು ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಸೇರಿದಂತೆ ಅನೇಕ ಸರ್ಕಾರಿ ಕಚೇರಿ ಗಳಿಗೆ ಬಂದು ಹೋಗುವವರಿಗೆ ಶೌಚಾಲಯ ಇಲ್ಲದೆ ಪರೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದ ರಿಂದ ಇರುವ ಶೌಚಾಲಯಕ್ಕೆ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು.
ನಗರಸಭೆ ಆಯುಕ್ತರು ಕೂಡಲೇ ಗಮನ ಹರಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡ ಬೇಕು. ಇಲ್ಲವಾದಲ್ಲಿ ಶೌಚಾಲಯ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.