ವಿಐಎಸ್‌ಎಲ್ ಪುನರುಜ್ಜೀವನ: ಎಚ್‌ಡಿಕೆಗೆ ಮನವಿ

ವಿಜಯ ಸಂಘರ್ಷ 
ಭದ್ರಾವತಿ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿ ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆಯನ್ನು ಬಂಡವಾಳ ಹಿಂತೆಗೆತ ಪಟ್ಟಿಯಿಂದ ಕೈಬಿಟ್ಟು ಪುನರುಜ್ಜೀವನ ಗೊಳಿಸಲು ಅಗತ್ಯ ಬಂಡವಾಳ ಹೂಡುವಂತೆ ಸೈಲ್ ಗೆ ನಿರ್ದೇಶನ ನೀಡುವಂತೆ ಕೋರಿದರು.

ವಿಐಎಸ್‌ಎಲ್ ಕಾರ್ಖಾನೆ ಪುನರು ಜ್ಜೀವನ ಗೊಳಿಸಿದರೆ ಕರ್ನಾಟಕದಲ್ಲಿ ಕೈಗಾರಿಕೆ ಅಭಿವೃದ್ಧಿ ಅಷ್ಟೇ ಅಲ್ಲದೆ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಲಿದೆ. ಜೊತೆಗೆ ಈ ಭಾಗದ ಸಾವಿರಾರು ಕಾರ್ಮಿಕ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುತ್ತದೆ ಎಂಬ ಅಂಶವನ್ನು ಮನವರಿಕೆ ಮಾಡಿ ಕೊಡಲಾಯಿತು. 

ಈ ಸಂದರ್ಭದಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಐಎಸ್‌ಎಲ್ ನೌಕರರ ಸಂಘದ ಪದಾಧಿಕಾರಿಗಳಾದ ಜೆ.ಜಗದೀಶ, ಕೆ.ಬಿ.ಮಲ್ಲಿಕಾರ್ಜುನ, ಅಮೃತ್ ಕುಮಾರ್, ಕೆ.ಆರ್‌.ಮನು, ಎಸ್‌.ಮೋಹನ್ ಹಾಗೂ ಗುತ್ತಿಗೆ ಕಾರ್ಮಿಕ ನೌಕರರ ಪರವಾಗಿ ಎಸ್.ವಿನೋದ್ ಕುಮಾರ್ ಜೆ. ಕಿರಣ್ ಮತ್ತು ಆನಂದ್ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು