ಬಸವಸಾಗರ ಜಲಾಶಯ ಭರ್ತಿ: ಸಚಿವರಿಂದ ಬಾಗಿನ ಅರ್ಪಣೆ

ವಿಜಯ ಸಂಘರ್ಷ 
ನಾರಾಯಣಪುರ: ಗಂಗೆ ನಮ್ಮೆಲ್ಲರ ಮೇಲೆ ದಯೆತೋರಿ ರೈತರಲ್ಲಿ ಮತ್ತು ಜನರಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರು, ರೈತರ ಜಮೀನುಗಳಿಗೆ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅಭಿಪ್ರಾಯಪಟ್ಟರು.

ಅವರು ಮಂಗಳವಾರ ನಾರಾಯಣ ಪುರದ ಬಸವಸಾಗರ ಜಲಾಶಯ ಭರ್ತಿ ಯಾದ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ 
ಜಿ.ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

(✍️ ವರದಿ: ಶಿವು ರಾಠೋಡ ಯಾದಗಿರಿ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು