ವಿಜಯ ಸಂಘರ್ಷ
ಸಾಗರ: ನಾಗರ ಪಂಚಮಿ ಹಬ್ಬದಂದೇ ಬಾಣಂತಿಯೊಬ್ಬರಿಗೆ ಹಾವು ಕಡಿದು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ರಂಜಿತಾ (22) ಮೃತರು,ಗದ್ದೆಯಲ್ಲಿ ಮೇವು ತರಲು ಹೋಗಿದ್ದಾಗ ಹಾವು ಕಡಿದಿದೆ. ಕುಟುಂಬದವರು ನೋಡಿದಾಗ ಬಾಣಂತಿ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಮೂರು ವರ್ಷದ ಹೆಣ್ಣು ಹಾಗೂ 4 ತಿಂಗಳ ಗಂಡು ಮಗು ಇದೆ. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
Tags:
ಸಾಗರ ಸುದ್ದಿ