ರಾಜ್ಯಪಾಲರನ್ನು ರಾಷ್ಟ್ರಪತಿಗಳು ದೆಹಲಿಗೆ ಕರೆಸಿಕೊಳ್ಳಲಿ: ಶಶಿಕುಮಾರ್ ಎಸ್ ಗೌಡ ಆಗ್ರಹ

ವಿಜಯ ಸಂಘರ್ಷ 
ಭದ್ರಾವತಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಭ್ರಷ್ಟಾಚಾರ ದಲ್ಲಿ ಭಾಗಿಯಾಗಿದ್ದಾರೆಂದು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆರೋಪಿಸಿದರು.

ಅವರು ಶುಕ್ರವಾರ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿ, ರಾಜ್ಯದ ಪ್ರಜ್ಞಾವಂತ ನಾಗರಿಕರು, ಸಾಹಿತಿಗಳು, ಬುದ್ದಿಜೀವಿ ಗಳು ರಾಜ್ಯಪಾಲರ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಗಳು ನಡೆಸುತ್ತಿರುವುದು ಮಾಧ್ಯಮ ಗಳಲ್ಲಿ ವರದಿಯಾಗುತ್ತಿವೆ. ಇದನ್ನು ಗಮನಿಸಿದಲ್ಲಿ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿರು ವುದು ಕಂಡು ಬರುತ್ತಿದೆ ಎಂದು ಕಿಡಿ ಕಾರಿದರು.

ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿ ಗಳಾದ ಕೆಂಗಲ್ ಹನುಮಂತಯ್ಯ, ದೇವರಾಜ ಅರಸು, ರಾಮಕೃಷ್ಣ ಹೆಗಡೆ, ಎಸ್. ಬಂಗಾರಪ್ಪ, ಎಚ್.ಡಿ. ದೇವೇಗೌಡ, ಜೆ.ಹೆಚ್.ಪಟೇಲ್ ರವರುಗಳ ಹಾದಿಯಲ್ಲಿಯೇ ಸಿದ್ದರಾಮಯ್ಯ ನವರು ಪ್ರತಿಯೊಬ್ಬ ನಾಗರೀಕರಿಗೂ ಸಾಮಾಜಿಕ ನ್ಯಾಯ ಅಲ್ಪಸಂಖ್ಯಾತರಿಗೆ, ಹಿಂದುಳಿದ, ದಲಿತರಿಗೆ ಹಾಗೂ ರಾಜ್ಯದ ಅತಿ ಸಣ್ಣ ಸಮುದಾಯಗಳಿಗೂ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ನ್ಯಾಯ ದೊರಕಿಸಿ ಕೊಡುವ ಅತ್ಯುತ್ತಮ ಕಾರ್ಯಗಳನ್ನು ಸಹಿಸದ ರಾಜ್ಯಪಾಲ ರನ್ನು ರಾಷ್ಟ್ರಪತಿಗಳು ದೆಹಲಿಗೆ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು