ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ನಗರದಲ್ಲಿ ಸೆ.18 ಹಾಗೂ 19 ರಂದು ಎರಡು ದಿನಗಳ ಕಾಲ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಕಟಣೆ ತಿಳಿಸಿದೆ.
ನಗರದ ಕೃಷ್ಣ ರಾಜೇಂದ್ರ ಜಲ ಶುದ್ದೀಕರಣ ಘಟಕಕ್ಕೆ, ಮಹಾನಗರ ಪಾಲಿಕೆ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಲಾಗಿದೆ.
ಕೇಬಲ್ ಚಾಲನೆಗೊಳಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ. 18 ರಂದು ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮನವಿ ಮಾಡಿದೆ.